ನವದೆಹಲಿ: ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಕಳೆದ 7 ತಿಂಗಳಿನಿಂದಲೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೆಣ್ಣುವಿಗೆ ಜನ್ಮ ನೀಡಿದ್ದಾರೆ.
ಏಮ್ಸ್ ಟ್ರಾಮಾ ಸೆಂಟರ್ ಗೆ ಪ್ರಜ್ಞಾಹೀನ ಸ್ಥಿತಿಯಲ್ಲೇ ದಾಖಲಾಗಿದ್ದ ಗರ್ಭಿಣಿ ಮಹಿಳೆಗೆ ಮೆದುಳಿಗೆ ಸಂಬಂಧಿಸಿದ ನಾಲ್ಕು ಪ್ರಮುಖ ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದಾರೆ ಬಳಿಕ ಕೋಮಾಕ್ಕೆ ತಿರುಗಿದ ಮಹಿಳೆ ಸುಮಾರು ಏಳು ತಿಂಗಳ ಕಾಲ ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದರು ಎನ್ನಲಾಗಿದೆ , ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರಿಗೆ ಅಚ್ಚರಿಯ ಸುದ್ದಿಯೊಂದು ತಿಳಿಯಿತು, ಅದು ಗರ್ಭಿಣಿ ಮಹಿಳೆಯ ಹೊಟ್ಟೆಯಲ್ಲಿದ್ದ ಮಗು ಸುರಕ್ಷಿತವಾಗಿರುವುದು, ಅಪಘಾತಗೊಂಡರು ಮಗುವಿನ ಆರೋಗ್ಯಕ್ಕೆ ಯಾವುದೇ ತೊಂದರೆ ಆಗದಿರುವುದೇ ಸಂತಸದ ವಿಚಾರ, ಅದರಂತೆ ವೈದ್ಯರು ಹಾಗೂ ಮನೆಯವರು ಮಗುವಿನ ರಕ್ಷಣೆಗೆ ಮುಂದಾಗಿದ್ದಾರೆ.
ಕಳೆದ ಏಳು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಮಹಿಳೆಗೆ ಏಮ್ಸ್ ಆಸ್ಪತ್ರೆಯ ವೈದ್ಯರು ಸಾಮಾನ್ಯ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ವಿವರ : ಕಳೆದ ಏಪ್ರಿಲ್ ತಿಂಗಳಲ್ಲಿ ಬುಲಂದ್ ಶಹರ್ ಮೂಲದ 23 ವರ್ಷದ ಗರ್ಭಿಣಿ ಮಹಿಳೆಯೊಬ್ಬರು ಹೆಲ್ಮೆಟ್ ಧರಿಸದೇ ಗಂಡನ ಜೊತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಆಕೆಯನ್ನು ದೆಹಲಿಯ ಏಮ್ಸ್’ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು.
ಇದನ್ನೂ ಓದಿ : ಚುನಾವಣೆಗೆ ಮೊದಲೊಂದು ಮಾಸ್ಟರ್ ಸ್ಟ್ರೋಕ್: ಗುಜರಾತ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ?