Advertisement

Odisha Train ದುರಂತ; ಪತಿ ಮೃತಪಟ್ಟಿದ್ದಾನೆ ಎಂದು ಸುಳ್ಳು ಕಥೆ ಕಟ್ಟಿದ ಮಹಿಳೆ!

03:25 PM Jun 07, 2023 | Team Udayavani |

ಹೊಸದಿಲ್ಲಿ: ಬಾಲಸೋರ್ ಘೋರ ರೈಲು ಅಪಘಾತದಲ್ಲಿ ತನ್ನ ಪತಿ ಸಾವನ್ನಪ್ಪಿದ್ದಾನೆ ಎಂದು ರಾಜ್ಯ ಸರ್ಕಾರ ಮತ್ತು ರೈಲ್ವೆ ಘೋಷಿಸಿದ ಪರಿಹಾರದ ಹಣಕ್ಕಾಗಿ ಸುಳ್ಳು ಸೃಷ್ಟಿ ಮಾಡಲು ಪ್ರಯತ್ನಿಸಿದ ಮಹಿಳೆ ಸಂಕಷ್ಟಕ್ಕೆ ಸಿಲುಕಿದ್ದಾಳೆ.

Advertisement

ಕಟಕ್ ಜಿಲ್ಲೆಯ ಮಣಿಬಂಡಾದ ಗೀತಾಂಜಲಿ ದತ್ತಾ ಜೂನ್ 2 ರಂದು ನಡೆದ ಅಪಘಾತದಲ್ಲಿ ತನ್ನ ಪತಿ ಬಿಜಯ್ ದತ್ತಾ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದಳು ಮತ್ತು ಮೃತದೇಹವನ್ನು ತನ್ನ ಗಂಡನದೇ ಎಂದು ಗುರುತಿಸಿದ್ದಳು. ಆದರೆ, ದಾಖಲೆಗಳ ಪರಿಶೀಲನೆಯ ನಂತರ ಆಕೆ ಹೇಳಿದ್ದು ಸುಳ್ಳು ಎಂದು ತಿಳಿದುಬಂದಿದೆ.

ಪೊಲೀಸರು ಎಚ್ಚರಿಕೆ ನೀಡಿ ಆಕೆಯನ್ನು ಬಿಟ್ಟಿದ್ದಾರಾದರೂ, ಪತಿ ಮಣಿಯಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಸಂಕಷ್ಟ ಶುರುವಾಗಿದೆ. ಬಂಧನದ ಭೀತಿಯಿಂದ ಮಹಿಳೆ ಈಗ ತಲೆಮರೆಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ 13 ವರ್ಷಗಳಿಂದ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕರ ಹಣವನ್ನು ದೋಚಲು ಯತ್ನಿಸಿದ ಗೀತಾಂಜಲಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜಯ್ ಒತ್ತಾಯಿಸಿದ್ದಾರೆ.

ದುರಂತದ ಬಳಿಕ ರೈಲ್ವೆ ಸಚಿವಾಲಯ 10 ಲಕ್ಷ ರೂಪಾಯಿ ಪರಿಹಾರ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next