Advertisement
ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ಎದುರು ಹಾದು ಹೋಗಿರುವ ಸಾರ್ವಜನಿಕ ರಸ್ತೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕ ಪ್ರಯಾಣಿಕರನ್ನು ಇಳಿಸಲೆಂದು ಬಸ್ ನಿಲ್ಲಿಸಿದ್ದು, ಬಸ್ ನಿಧಾನ ಹಂತದಲ್ಲಿದ್ದಾಗ ಬಸ್‌ನ ಪ್ರಯಾಣಿಕ ಪವಿತ್ರಾ ಬಸವರಾಜ್ ಹಾಲಪ್ಪನವರ್ ಎಂಬ ಮಹಿಳೆ ಇಳಿಯಲು ಪ್ರಯತ್ನಿಸಿದ್ದಾರೆ. ಇದೇ ವೇಳೆ ಬಸ್ ಮುಂದಕ್ಕೆ ಚಲಿಸಿದೆ. ಪರಿಣಾಮ ಮಹಿಳೆ ರಸ್ತೆಗೆ ಬಿದ್ದು ಗಾಯಗೊಂಡರು. ಗಾಯಾಳು ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ನಿರ್ವಾಹಕ ರವೀಂದ್ರ ಅವರು ಮಹಿಳೆ ಬಸ್‌ನಿಂದ ಇಳಿಯುವುದನ್ನು ಸರಿಯಾಗಿ ಗಮನಿಸದೇ ಇದ್ದ ಕಾರಣ ಬಸ್ ಚಾಲಕ ಲಕ್ಷ್ಮಣ್ ಬಸ್ ದುಡುಕುತನ ಮತ್ತು ನಿರ್ಲಕ್ಷತನದಿಂದ ಒಮ್ಮಲೇ ಮುಂದಕ್ಕೆ ಚಲಾಯಿಸಿದ ಪರಿಣಾಮ ಘಟನೆ ನಡೆದಿದ್ದಾಗಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Udupi: ಕೆಎಸ್ಸಾರ್ಟಿಸಿ ಬಸ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಗಾಯ: ಪ್ರಕರಣ ದಾಖಲು
08:01 PM Nov 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.