Advertisement

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್!

12:03 PM Sep 19, 2020 | Nagendra Trasi |

ಅಲ್ವಾರ್(ರಾಜಸ್ಥಾನ್):45ವರ್ಷದ ಮಹಿಳೆ ಮೇಲೆ ಆರು ಮಂದಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಅಲ್ವಾರ್ ನಲ್ಲಿ ನಡೆದಿದ್ದು, ಆರೋಪಿಗಳ ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಅದನ್ನು ಆನ್ ಲೈನ್ ನಲ್ಲಿ ಅಪ್ ಲೋಡ್ ಮಾಡಿರುವುದಾಗಿ ವರದಿ ತಿಳಿಸಿದೆ.

Advertisement

ಸೆಪ್ಟೆಂಬರ್ 17ರಂದು(2020) ಪ್ರಕರಣ ದಾಖಲಾಗಿದೆ. ತಾನು ಪಡೆದಿದ್ದ ಸಾಲದ ಹಣವನ್ನು ಮರಳಿಸಲು ತನ್ನ ಸಂಬಂಧಿಯೊಡನೆ ಮಹಿಳೆ ತೆರಳಿದ್ದಳು. ಹಣ ಕೊಟ್ಟು ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಗುಡ್ಡಪ್ರದೇಶದಲ್ಲಿ ಆರು ಮಂದಿ ಈಕೆಯನ್ನು ತಡೆಗಟ್ಟಿರುವುದಾಗಿ ಡಿಎಸ್ ಪಿ ಟಿಜಾರಾ ಕುಶಾಲ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ಮಹಿಳೆ ಜತೆ ಅನುಚಿತವಾಗಿ ವರ್ತಿಸಿದ್ದಲ್ಲದೆ, ಸಂಬಂಧಿ ಹುಡುಗನಿಗೆ ಥಳಿಸಿದ್ದರು. ನಂತರ ಆಕೆಯನ್ನು ಒಬ್ಬಾತ ಹಿಡಿದುಕೊಂಡು ಅತ್ಯಾಚಾರ ಎಸಗಿದ್ದ. ಬಳಿಕ ಒಬ್ಬೊಬ್ಬರು ಆಕೆ ಮೇಲೆ ಅತ್ಯಾಚಾರ ಎಸಗಿದ್ದು, ಈ ಕೃತ್ಯದ ವಿಡಿಯೋವನ್ನು ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದಾಗಿ ವಿವರಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಮಹಿಳೆ ವಿಷಯವನ್ನು ಪತಿಗೆ ತಿಳಿಸಿದ್ದು, ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈವರೆಗೆ ಆರು ಮಂದಿಯನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next