Advertisement

ಅಡುಗೆ ಕೋಣೆಯಲ್ಲಿ ಗ್ಯಾಸ್‌ ಸೋರಿಕೆಯಿಂದ ಬೆಂಕಿ: ಮಹಿಳೆ ಸಾವು

11:07 AM Nov 13, 2018 | Team Udayavani |

ಮುಜಫ‌ರನಗರ : ಜಿಲ್ಲೆಯ ಅಹ್ಮದ್‌ಪುರ ಗ್ರಾಮದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್‌ ನಿಂದ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಕಾರಣ ಅಡುಗೆ ತಯಾರಿಸುವಲ್ಲಿ ನಿರತಳಾಗಿದ್ದ ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.

Advertisement

ಮೃತ ಮಹಿಳೆಯನ್ನು ರಚನಾ ಎಂದು ಗುರುತಿಸಲಾಗಿದೆ. ತೀವ್ರ ಸುಟ್ಟಗಾಯಗಳಿಗೆ ಗುರಿಯಾಗಿದ್ದ ರಚನಾ ಅವರನ್ನು ಒಡನೆಯೇ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅಲ್ಲಿ  ಆಕೆ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಳೆಂದು ಪೊಲೀಸರು ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next