Advertisement

ಚಾಮರಾಜನಗರ ಜಿಲ್ಲೆಯಲ್ಲಿ ಮಹಿಳಾ ಅಧಿಕಾರಿಗಳದ್ದೇ ಅಧಿಪತ್ಯ 

01:45 PM Jul 12, 2023 | Team Udayavani |

ಚಾಮರಾಜನಗರ: ಜಿಲ್ಲಾಧಿ ಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ, ಡಿವೈಎಸ್‌ಪಿ ಸೇರಿದಂತೆ ಜಿಲ್ಲೆಯ ಪ್ರಮುಖ ಹುದ್ದೆಗಳಲ್ಲಿ ಈಗ ಮಹಿಳೆಯರೇ ಅಧಿಪತ್ಯ ಸ್ಥಾಪಿಸಿದ್ದಾರೆ. ಮಂಗಳವಾರ ನೂತನ ಜಿಲ್ಲಾಧಿಕಾರಿಯಾಗಿ ಶಿಲ್ಪಾ ನಾಗ್‌ ಅಧಿಕಾರ ಸ್ವೀಕರಿಸಿದರು. ಈ ಮೂಲಕ ಜಿಲ್ಲೆಯ ಮೂರು ಪ್ರಮುಖ ಸ್ಥಾನಗಳಲ್ಲಿ ಮಹಿಳೆಯರೇ ಅಧಿಕಾರ ವಹಿಸಿಕೊಂಡಂತಾಗಿದೆ.

Advertisement

ಜಿಲ್ಲಾಧಿಕಾರಿ ಶಿಲ್ಪಾ, ಜಿ.ಪಂ. ಸಿಇಒ ಪೂವಿತಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದಲ್ಲದೇ ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಗೀತಾ ಹುಡೇದ, ಬಿಳಿಗಿರಿರಂಗನಾಥ ಹುಲಿ ರಕ್ಷಿತಾ ರಣ್ಯದ ಸಂರಕ್ಷಣಾಧಿಕಾರಿ ದೀಪ್‌ ಜೆ ಕಂಟ್ರಾಕ್ಟರ್‌, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸರಸ್ವತಿ, ಚಾ.ನಗರ ಡಿವೈಎಸ್‌ಪಿಯಾಗಿ ಪ್ರಿಯದರ್ಶಿನಿ ಸಾಣೆಕೊಪ್ಪ, ಮಹಿಳಾ ಮತ್ತು ಮಕ್ಕಳœ ಇಲಾಖೆ ಉಪನಿರ್ದೇಶಕಿ ಗೀತಾಲಕ್ಷ್ಮಿ, ಭೂ ದಾಖಲೆಗಳ ಉಪನಿರ್ದೇಶಕಿ ವಿದ್ಯಾಯಿನಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ.ವಿ. ಸುಧಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಧಾ, ಜಿಲ್ಲಾ ಖಜಾನಾಧಿಕಾರಿ ಸುಲೋಚನಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ.ಸವಿತಾ, ಜಿಲ್ಲಾ ಆಯುಷ್‌ ಅಧಿಕಾರಿಯಾಗಿ ಡಾ. ಸುಜಾತಾ, ಕೊಳ್ಳೇಗಾಲ ತಹಶೀಲ್ದಾರ್‌ ಮಂಜುಳಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಧೀಶರಾಗಿ ಬಿ.ಎಸ್‌. ಭಾರತಿ, ಮಕ್ಕಳ ಸ್ನೇಹಿ ಮತ್ತು ಹೆಚ್ಚುವರಿ ಸೆಷೆನ್ಸ್‌ ನ್ಯಾಯಾಧೀಶರಾಗಿ ನಿಶಾರಾಣಿ, ಚಾ.ನಗರ ಜೆಎಂಎಫ್ಸಿ ಹೆಚ್ಚುವರಿ ಹಿರಿಯ ನ್ಯಾಯಾಧೀಶೆ ಚಂಪಕಾ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ಹೆಚ್ಚಿನ ಇಲಾಖೆಗಳ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಕರ್ತವ್ಯ ನಿರ್ವಹಿಸುತ್ತಿರುವುದು ವಿಶೇಷವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next