Advertisement

ಯಾದಗಿರಿ: ಕಲುಷಿತ ನೀರು ಸೇವಿಸಿ ವಾಂತಿ ಭೇದಿ; ಮಹಿಳೆ ಮೃತ್ಯು

12:09 PM Feb 15, 2023 | Team Udayavani |

ಯಾದಗಿರಿ: ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಲ್ಬಣಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ.

Advertisement

ಸಾವಿತ್ರಮ್ಮ (35) ಮೃತ ಮಹಿಳೆ.

ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿರುವ ಪರಿಣಾಮ ಕಲುಷೀತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣಗೊಂಡಿದೆ. ಇದುವರೆಗೆ  30 ಜನರಲ್ಲಿ ಕಾಣಿಸಿಕೊಂಡ ವಾಂತಿ ಭೇದಿ ಕಾಣಿಸಿಕೊಂಡಿದೆ. ನಿನ್ನೆ 24 ,ಇಂದು 6 ಜನರಿಗೆ ಕಾಣಿಸಿಕೊಂಡ ವಾಂತಿ ಭೇದಿ ಕಾಣಿಸಿಕೊಂಡಿದೆ.

ಸಾವಿತ್ರಮ್ಮ ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.

ವಾಂತಿ ಭೇದಿ ಉಲ್ಬಣಗೊಂಡು ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 13 ಜನ ದಾಖಲಾಗಿದ್ದಾರೆ. ತೆಲಂಗಾಣದ ನಾರಾಯಣಪೇಟೆನಲ್ಲಿ 8 , ಮೈಬೂಬನಗರದ ಖಾಸಗಿಯಲ್ಲಿ 4 ವರ್ಷದ ಬಾಲಕ ದಾಖಲಾಗಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next