ಚೆನ್ನೈ : ತಮಿಳುನಾಡಿನಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಪೊಲೀಸರು ಜೀವದ ಹಂಗು ತೊರೆದು ಜನರ ಪ್ರಾಣ ಉಳಿಸುತ್ತಿದ್ದಾರೆ.
ಮಳೆಯಿಂದ ರಸ್ತೆಗಳೆಲ್ಲಾ ನೀರಿನಿಂದ ಆವೃತ್ತವಾಗಿದ್ದು, ಮತ್ತೊಂದೆಡೆ ಮತ್ತೆ ಭಾರೀ ಗಾಳಿ, ಮಳೆ ಸುರಿಯಲಿದೆ ಎಂಬ ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಗುರುವಾರ ಸಂಜೆ 6 ಗಂಟೆವರೆಗೆ ವಿಮಾನಗಳ ಆಗಮನಕ್ಕೆ ಚೆನ್ನೈ ವಿಮಾನ ನಿಲ್ದಾಣ ನಿರ್ಬಂಧ ವಿಧಿಸಿದೆ.
ಈ ನಡುವೆ ಸಾಮಾಜಿ ಜಾಲತಾಣದಲ್ಲಿ ಒಂದು ವಿಡಿಯೋ ಹರಿದಾಡುತ್ತಿದ್ದು, ಮಹಿಳಾ ಇನ್ ಸ್ಪೆಕ್ಟರ್ ಒಬ್ಬರು ಪ್ರಜ್ಞೆ ತಪ್ಪಿದ ವ್ಯಕ್ತಿಯನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಸಾಗಿದ್ದಾರೆ. ಈ ವಿಡಿಯೋ ಭಾರೀ ಮೆಚ್ಚುಗೆಗೆ ಪಾತ್ರವಾಗುತ್ತಿದೆ.
ಈ ವಿಡಿಯೋವನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಇನ್ಸ್‌ಪೆಕ್ಟರ್ ರಾಜೇಶ್ವರಿ ಅವರ ಭುಜಗಳ ಶಕ್ತಿ ಯಾರಿಗೂ ಇಲ್ಲ. ಭೀಕರ ಮಳೆಯಲ್ಲಿ ಪ್ರಜ್ಞೆ ತಪ್ಪಿದ ವ್ಯಕ್ತಿಯನ್ನು ಆಟೊದಲ್ಲಿ ಹತ್ತಿರದ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದ್ದು ನಿಜಕ್ಕೂ ಶ್ಲಾಘನೀಯ ಎಂದು ಬರೆದಿದ್ದಾರೆ.