ಬೆಳ್ಮಣ್: ಮಹಿಳೆ ಶಕ್ತಿ ಸ್ವರೂಪಿಣಿ ಎಂದು ಜಿ.ಪಂ.ಸದಸ್ಯೆ ರೇಶ್ಮಾ ಉದಯಕುಮಾರ್ ಶೆಟ್ಟಿ ಹೇಳಿದರು.
ನಿಟ್ಟೆ ಪಂಚಾಯತ್ ಸಭಾಂಗಣದಲ್ಲಿ ನಿಟ್ಟೆ ಮಹಿಳಾ ಸಮಾಜ, ಗ್ರಾಮ ಪಂಚಾಯತ್ ನಿಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀಶಕ್ತಿ ಗುಂಪುಗಳ ಜಂಟಿ ಆಶ್ರಯದಲ್ಲಿ ನಡೆದ ಮಹಿಳೆಯರಿಗಾಗಿ ವಿಶೇಷ ಗ್ರಾಮಸಭೆ ಮತ್ತು ವಿಶ್ವ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರಿಗಾಗಿ ಇರುವ ಸರಕಾರಿ ಸೌಲಭ್ಯಗಳ ಬಗ್ಗೆ ಇಲಾಖೆಗಳು ಸೂಕ್ತ ಮಾಹಿತಿ ನೀಡುವ ಮೂಲಕ ಪೂರ್ಣ ಪ್ರಮಾಣದ ಪ್ರಯೋಜನ ಪಡೆದುಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಅವರು ತಿಳಿಸಿದರು.
ಪಂಚಾಯತ್ ಅಧ್ಯಕ್ಷೆ ಸಬಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ಯೋಜನಾಧಿಕಾರಿ ಕುಮಾರ ನಾಯ್ಕ ಎ., ಕಾರ್ಕಳ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಯಶೋದಾ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜಕ ಸಚ್ಚಿದಾನಂದ, ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರುತಿ ನಾಯಕ್, ನಿಟ್ಟೆ ವಲಯ ಮೇಲ್ವಿಚಾರಕಿ ರಾಜೇಶ್ವರಿ ಭಟ್, ಮಹಿಳಾ ಸಬಲೀಕರಣಕ್ಕೆ ಪೂರಕವಾದ ವಿವಿಧ ಯೋಜನೆಗಳ ಆರೋಗ್ಯ ಮಾಹಿತಿ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿ ಕಾರಿ ಮಾಧವ ರಾವ್ ದೇಶಪಾಂಡೆ, ಉಪಾಧ್ಯಕ್ಷ ಗೋಪಾಲ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
ಮಹಿಳಾ ಸಮಾಜದ ಅಧ್ಯಕ್ಷೆ ಶ್ರೀಲತಾ ಶರ್ಮಾ ಸ್ವಾಗತಿಸಿದರು. ಮಹಿಳಾ ಸಮಾಜದ ಕಾರ್ಯದರ್ಶಿ ಪ್ರಮೀಳಾ ವಂದಿಸಿದರು.