ಮುಂಬೈ : ವಾಣಿಜ್ಯ ನಗರಿ ಮುಂಬೈನಲ್ಲಿ35 ವರ್ಷ ವಯಸ್ಸಿನ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ಶುಕ್ರವಾರ ಬೆಳಗಿನ ಜಾವ 3 ರಂದು ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ದುಷ್ಕರ್ಮಿಗಳು, ಆಕೆಯ ಖಾಸಗಿ ಭಾಗಕ್ಕೆ ರಾಡ್ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಈ ಪ್ರಕರಣ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣವನ್ನು ಹೋಲುವಂತಿದೆ.
ಸಂತ್ರಸ್ಥೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಘಟನೆ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತಷ್ಟು ದುಷ್ಕರ್ಮಿಗಳು ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಮುಂಬೈನ ಸಾಕಿ ನಾಕಾ ಪ್ರದೇಶದ ಕೈರಾನಿ ರಸ್ತೆಯಲ್ಲಿ ಘಟನೆ ನಡೆದಿದೆ. ಡಿಸಿಪಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.