ಗದಗ: ಬಿರು ಬಿಸಿಲಿನಿಂದ ಬಸವಳಿದಿದ್ದ ನರೇಗಾ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಮಲ್ಲವ್ವ ಶರಣಪ್ಪ ಪವಾಡಶೆಟ್ಟಿ (49) ಮೃತಪಟ್ಟವರು. ರೋಣ ರಸ್ತೆಯಲ್ಲಿ ರುವ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿದ್ದರು. ಸೋಮವಾರ 39 ಡಿಗ್ರಿ ಸೆಲ್ಸಿಯಸ್ ತಾಪಮಾನ ತಲುಪಿದ್ದರಿಂದ ನೆತ್ತಿ ಸುಡುವ ಬಿಸಿಲಿನಿಂದ ನಿತ್ರಾಣಗೊಂಡಿದ್ದ ಮಲ್ಲವ್ವ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಈ ವೇಳೆ ಸಹ ಕಾರ್ಮಿಕರು ನೀರು ಕುಡಿಸಿ ಪ್ರಾಥಮಿಕ ಚಿಕಿತ್ಸೆ ನೀಡುವ ಪ್ರಯತ್ನ ನಡೆಸಿದರು. ಬಳಿಕ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ.
Advertisement