Advertisement

Bihar: ಮನೆಗೆ ಬಂದ ಪ್ರಿಯಕರನ ಖಾಸಗಿ ಅಂಗವನ್ನು ಕತ್ತರಿಸಿ ರಸ್ತೆಗೆ ಎಸೆದ ಪ್ರಿಯತಮೆ.!

02:34 PM Mar 05, 2024 | Team Udayavani |

ಪಾಟ್ನಾ: ಯುವತಿಯೊಬ್ಬಳು ಪ್ರಿಯಕರನನ್ನು ಮನೆಗೆ ಕರೆದು ಆತನ ಖಾಸಗಿ ಅಂಗವನ್ನು ಕತ್ತರಿಸಿ ರಸ್ತೆಗೆ ಎಸೆದಿರುವ ಘಟನೆ ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ನಡೆದಿದೆ.

Advertisement

ಪ್ರಿಯತಮೆ ಪ್ರಿಯಕರ ಅನಿಲ್ ಗೊಂಡ್(25) ನನ್ನು ಕರೆ ಮಾಡಿ ಮನೆಗೆ ಬರುವಂತೆ ಹೇಳಿದ್ದಾಳೆ. ಮನೆಗೆ ಬಂದ ಪ್ರಿಯಕರನ ಮೇಲೆ ಯುವತಿ ಹಲ್ಲೆ ನಡೆಸಿದ್ದು, ಆತನ ಖಾಸಗಿ ಅಂಗವನ್ನು ಕತ್ತರಿಸಿ ರಸ್ತೆಗೆ ಎಸೆದಿದ್ದಾಳೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಿಯಕರನನ್ನು ನೋಡಿ ಆತ ಸತ್ತು ಹೋಗಿದ್ದಾನೆ ಎಂದು ಭಾವಿಸಿ ಯುವತಿ ಅಲ್ಲಿಂದ ಪರಾರಿ ಆಗಿದ್ದಾಳೆ.

ಆದರೆ ತೀವ್ರವಾಗಿ ಗಾಯಗೊಂಡಿದ್ದ ಪ್ರಿಯಕರ ಅಲ್ಲಿಂದ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿ, ಬಳಿಕ ವಿಚಾರವನ್ನು ಕುಟುಂಬಸ್ಥರಿಗೆ ಹಾಗೂ ಪೊಲೀಸರಿಗೆ ತಿಳಿಸಿದ್ದಾರೆ.

ಅನಿಲ್ ತನ್ನ ಗೆಳತಿಯ ಮನೆಗೆ ಕರೆದ ನಂತರ ದುಮ್ರಾನ್‌ನಲ್ಲಿರುವ ಮನೆಗೆ ಹೋಗಿದ್ದ. ಈ ವೇಳೆ ಈ ಕೃತ್ಯ ನಡೆದಿದೆ ಎಂದು ಸಹೋದರ ಪ್ರಮೋದ್ ಕುಮಾರ್ ಹೇಳಿದ್ದಾರೆ.

ಸದ್ಯ ಅನಿಲ್‌ ಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಗ್ಗೆ ನಮಗೆ ಮಾಹಿತಿ ದೊರೆತ ತಕ್ಷಣ ನಾವು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ. ಕೃತ್ಯದ ಹಿಂದಿನ ಕಾರಣವೇನು ಎನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಡುಮ್ರಾನ್ ಪೊಲೀಸ್ ಅಧಿಕಾರಿ ಅನಿಶಾ ರಾಣಾ ಹೇಳಿದ್ದಾರೆ.

Advertisement

ಅನಿಲ್‌ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next