ಮುಂಬೈ: ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ 20ವರ್ಷದ ಯುವತಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿರುವುದಾಗಿ ಪೊಲೀಸರು ಮಂಗಳವಾರ (ನವೆಂಬರ್ 28) ತಿಳಿಸಿದ್ದಾರೆ.
ಇದನ್ನೂ ಓದಿ:Agriculture: ಹಿಪ್ಪು ನೇರಳೆ ಕೃಷಿಯಲ್ಲಿ ಮರ ಪದ್ಧತಿ ಆವಿಷ್ಕರಿಸಿದ ರೈತನಿಗೆ ಸಿಗದ ಮನ್ನಣೆ
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸೋಮವಾರ ಬೆಳಗ್ಗೆ ಯುವತಿ ಮತ್ತು ಆಕೆಯ ಗೆಳೆಯನ ನಡುವೆ ಜಗಳ ನಡೆದಿದ್ದು, ಈ ಸಂದರ್ಭದಲ್ಲಿ ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ನಂತರ ಈಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
ಹಾಸ್ಟೆಲ್ ನಲ್ಲಿ ಆಕೆಯ ಶವ ಪತ್ತೆಯಾಗಿದ್ದು, ಆಸ್ಪತ್ರೆಗೆ ಕರೆದೊಯ್ದ ಸಂದರ್ಭದಲ್ಲಿ ಯುವತಿ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದರು. ಮಾಲ್ವಾನಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಅಗ್ನಿಪಥ್ ಯೋಜನೆಯಡಿ “ಅಗ್ನಿವೀರ್” ಸೈನಿಕರು ನಾಲ್ಕು ವರ್ಷ ಸೇವೆ ಸಲ್ಲಿಸಬಹುದಾಗಿದೆ. ಇದರಲ್ಲಿ ಆರು ತಿಂಗಳು ತರಬೇತಿ ಹಾಗೂ ಮೂರುವರೆ ವರ್ಷ ಅಗ್ನಿವೀರ್ ರಾಗಿ ಕಾರ್ಯನಿರ್ವಹಿಸಬಹುದಾಗಿದೆ. ನಂತರ ಸೇನಾಪಡೆಯಲ್ಲಿ ಮುಂದುವರಿಯಲು ಅರ್ಜಿ ಸಲ್ಲಿಸಬಹುದಾಗಿದೆ.