Advertisement

Belagavi: 10ತಿಂಗಳ ಗೃಹಲಕ್ಷ್ಮೀ ಹಣ ಕೂಡಿಟ್ಟು ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆ

01:27 PM May 22, 2024 | Team Udayavani |

ಬೆಳಗಾವಿ: ರಾಜ್ಯ ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯು ಬಡ ವರ್ಗದ ಹೆಣ್ಣುಮಕ್ಕಳಿಗೆ ಸಾಕಷ್ಟು ಅನುಕೂಲವಾಗಿದ್ದು ಇದೇ ಹಣ ಬಡ ಮಹಿಳೆಯ ಕಣ್ಣಿನ ಶಸ್ತ್ರಚಿಕಿತ್ಸೆಗೆ ನೆರವಾಗಿದೆ.

Advertisement

ರಾಮದುರ್ಗ ತಾಲೂಕಿನ ಸುರೇಬಾನ – ಮನಿಹಾಳ ಗ್ರಾಮದ  ಮಹಿಳೆಯೊಬ್ಬರು ಕಳೆದ 10 ತಿಂಗಳ ಗೃಹ ಲಕ್ಷ್ಮೀ ಹಣವನ್ನು ಕೂಡಿಟ್ಟು, ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.

ಮನಿಹಾಳ  ಗ್ರಾಮದ ಸಕ್ಕುಬಾಯಿ ಈರಣ್ಣ ಕರದಿನ, ಹಲವು‌ ತಿಂಗಳಿಂದ ಕಣ್ಣಿನ ಸಮಸ್ಯೆ ಎದುರಿಸುತ್ತಿದ್ದರು. ಬಲಗಣ್ಣಿನಲ್ಲಿ ಪೊರೆ ಬಂದಿದ್ದ ಕಾರಣ ಶಸ್ತ್ರಚಿಕಿತ್ಸೆ ಅನಿವಾರ್ಯವಾಗಿತ್ತು.

ಆದರೆ ಹಣಕಾಸಿನ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಸುಮ್ಮನಿದ್ದ ಸಕ್ಕುಬಾಯಿ, ಕಳೆದ 10 ತಿಂಗಳಿಂದ ರಾಜ್ಯ ಸರ್ಕಾರದಿಂದ ಬರುತ್ತಿರುವ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಟು, ಕಳೆದ ವಾರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

ರಾಮದುರ್ಗದ ಡಾ.ವಿಜಯ್ ಸುಲ್ತಾನ್ ಪುರ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.  ಪತಿ ಈರಣ್ಣ ಕರದಿನ, ನೇಕಾರರಾಗಿ ಕೆಲಸ ಮಾಡುತ್ತಿದ್ದು, ಮೂರು‌ ಮಕ್ಕಳ  ಕುಟುಂಬ ಇವರದ್ದಾಗಿದೆ.

Advertisement

ಗೃಹ ಲಕ್ಷ್ಮೀ ಯೋಜನೆ ನಮ್ಮ ಕುಟುಂಬವನ್ನು ಕೈಹಿಡಿತು. ನನ್ನ ಪತ್ನಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು. ಒಟ್ಟು 26 ಸಾವಿರ ಬಿಲ್ ಆಗಿದ್ದು, ಗೃಹ ಲಕ್ಷ್ಮೀ ಯೋಜನೆಯಿಂದ 20 ಸಾವಿರ ರೂಪಾಯಿ ಕೂಡಿಟ್ಟಿದ್ದೇವು. ಹೀಗಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅನುಕೂಲವಾಯಿತು ಎಂದು ಈರಣ್ಣ ಕರದಿನ ಸಂತಸ ವ್ಯಕ್ತಪಡಿಸಿದರು.

ಈ ವೇಳೆ ಗೃಹ ಲಕ್ಷ್ಮೀ ಯೋಜನೆಯ ರೂವಾರಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next