Advertisement
ಮಹಿಳೆ ಮೇಲೆ ನಡೆದ ಹೀನ ಕೃತ್ಯದ ವಿರುದ್ಧ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಸರಕಾರದ ವಿರುದ್ಧ ಬಿಜೆಪಿಯೂ ಮುಗಿ ಬಿದ್ದಿದೆ. ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಒಂದು ವಾರದಿಂದ ಅನೇಕ ಬೆಳವಣಿಗೆ ನಡೆಯುತ್ತಿರುವ ಬೆನ್ನಲ್ಲೇ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿ ಸಿ 11 ಆರೋಪಿಗಳನ್ನು ಬಂ ಧಿಸಲಾಗಿದೆ. ಎಫ್‌ಐಆರ್‌ನಲ್ಲಿ 12 ಮಂದಿಯಿದ್ದು, ಓರ್ವ ತಲೆಮರೆಸಿಕೊಂಡಿದ್ದಾನೆ. ಆದರೆ ಶನಿವಾರ ಬೆಳಗಾವಿಗೆ ಭೇಟಿ ನೀಡಿದ್ದ ಬಿಜೆಪಿಯ ಸತ್ಯಶೋಧನಾ ಸಮಿತಿ ಪ್ರಕಾರ, ಪ್ರಕರಣದಲ್ಲಿ ಭಾಗಿಯಾದ ಇನ್ನೂ ಇಬ್ಬರು ಹೊರಗಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದ ಮಹಿಳೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಹಾಗೂ ಸರಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿತ್ತು. ಈ ಹಿನ್ನೆಲೆಯಲ್ಲಿ ಡಿ.18ರಂದು ಹೈಕೋರ್ಟ್‌ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ವರದಿ ನೀಡಲಿದ್ದಾರೆ.