Advertisement

ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್‌ ಘಟಕ ನಿರಶನ

06:03 PM Sep 09, 2021 | Team Udayavani |

ರಾಯಚೂರು: ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ದಿನಬಳಕೆ ವಸ್ತುಗಳು ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಕಾರ್ಯಕರ್ತರು ಬುಧವಾರ ಕೊರಳಲ್ಲಿ  ವಿವಿಧ ಬಗೆಯ ತರಕಾರಿ ಹಾಕಿಕೊಂಡು ವಿನೂತನ ಪ್ರತಿಭಟನೆ ನಡೆಸಿದರು.

Advertisement

ನಗರದ ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟಿಸಿದ ಬಳಿಕ ಅಲ್ಲಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಕೇಂದ್ರ ಸರ್ಕಾರ ದಿನಬಳಕೆ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.

ಪೆಟ್ರೋಲ್‌, ಡೀಸೆಲ್‌ಬೆಲೆ ನೂರರ ಗಡಿದಾಟಿದ್ದರೆ,ಅಡುಗೆ ಅನಿಲ ಬೆಲೆ ಕೇವಲ ಒಂದೇ ವಾರದಲ್ಲಿ50 ರೂ. ಹೆಚ್ಚಿಸಲಾಗಿದೆ. ಬೆಲೆ ಏರಿಕೆಯಿಂದ ಬಡ,ಮಧ್ಯಮ ವರ್ಗದ ಪರದಾಡುವಂತಾಗಿದ್ದು, ಜೀವನ ನಿರ್ವಹಣೆ ಮಾಡುವುದೇ ಕಷ್ಟಕರ ಎನ್ನುವಂತಾಗಿದೆ ಎಂದರು. ಕೊರೊನಾದಿಂದ ಜನರಿಗೆ ಆದಾಯವಿಲ್ಲದೇ ಈಗಾಗಲೇ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ.

ಇಂಥ ವೇಳೆ ಅಗತ್ಯ ವಸ್ತುಗಳ ಬೆಲೆ ಕಡಿಮೆಗೊಳಿಸುವುದು ಬಿಟ್ಟು ಪ್ರತಿ ವಸ್ತುವಿನ ಬೆಲೆ ಹೆಚ್ಚಿಸುತ್ತಿರುವುದು ಖಂಡನೀಯ. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್‌ ಡೀಸೆಲ್‌ ಬೆಲೆ 70 ರೂ. ಒಳಗಿತ್ತು. ಆದರೆ, ಈಗ ನೂರರ ಗಡಿ ದಾಟಿದೆ. ಇನ್ನು ಅಡುಗೆ ಎಣ್ಣೆ, ಬೇಳೆ, ತರಕಾರಿ ಸೇರಿದಂತೆ ಪ್ರತಿ ವಸ್ತುವಿನ ಬೆಲೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಅದರ ಜತೆಗೆ ಜತೆಗೆ ವಿದ್ಯುತ್‌ ದರ ಕೂಡ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಜನರಿಗೆ ಶಾಕ್‌ ಮೇಲೆ ಶಾಕ್‌ ನೀಡುತ್ತಿದೆ. ಇದರಿಂದ ರೈತರಿಗೆ, ಬಡವರಿಗೆ ಸಮಸ್ಯೆಯಾಗಿದೆ.

ಕೂಡಲೇ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದರು. ಕಾಂಗ್ರೆಸ್‌ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾಬೆಣ್ಣೆ,ಕೆಪಿಸಿಸಿಮಹಿಳಾಘಟಕದ ಸದಸ್ಯೆ ಶ್ರೀದೇವಿ ನಾಯಕ, ಮುಖಂಡರಾದ ಶಶಿಕಲಾ ಭೀಮರಾಯ, ಈರಮ್ಮ, ವಂದನಾ, ಪದ್ಮಾ, ನವನೀತಾ, ರಜೀಯಾ ಪಟೇಲ್‌, ರಾಣಿರಿಚರ್ಡ್‌, ಮಾಲಾ ಭಜಂತ್ರಿ ಸೇರಿ ಅನೇಕರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next