Advertisement

ಶಾಸಕ ಮುನಿರತ್ನ ವಿರುದ್ಧ ಮಹಿಳಾ ಕಾರ್ಪೋರೇಟರ್‌ಗಳ ದೂರು 

12:42 PM Jun 06, 2017 | Team Udayavani |

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ನಡೆದ ಕಾಮಗಾರಿಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮೂವರು ಮಹಿಳಾ ಕಾರ್ಪೊರೇಟ್‌ಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.

Advertisement

ಲಗ್ಗೆರೆ ವಾರ್ಡ್‌ನ ಮಂಜುಳಾ ಎನ್‌. ಸ್ವಾಮಿ, ಜೆ.ಪಿ. ಪಾರ್ಕ್‌ನ ಮಮತಾ ವಾಸುದೇವ್‌, ಎಚ್‌.ಎಂ.ಟಿ. ವಾರ್ಡ್‌ನ ಆಶಾ ಸುರೇಶ್‌ ಮೂವರೂ ಜಂಟಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ ಜಗದೀಶ್‌ ಶೆಟ್ಟರ್‌ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ಗೆ ದೂರು ನೀಡಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮುನಿರತ್ನ ಹಾಗೂ ಅವರ ಬೆಂಬಲಿಗರು ಪಾಲಿಕೆ ಸದಸ್ಯರಾದ ನಮ್ಮ ಮೇಲೆ ನಿರಂತರ ದೌರ್ಜನ್ಯ ಮಾಡುತ್ತಿದ್ದಾರೆ. ಸ್ವತಂತ್ರವಾಗಿ ಕಾರ್ಯ ನಿರ್ವಹಿಸದಂತೆ ಬೆಂಬಲಿಗರ ಮೂಲಕ ಧಮಕಿ ಹಾಕುತ್ತಾರೆ. ನಮ್ಮ ವಾರ್ಡ್‌ಗಳಲ್ಲಿ ಅಕ್ರಮ ನಡೆಯುತ್ತಿರುವುದನ್ನು ಪ್ರಶ್ನಿಸಿದರೆ, ನಮ್ಮ ಕುಟುಂಬದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುತ್ತಾರೆ.

ಜನ ಪ್ರತಿನಿಧಿಗಳಾದ ನಮಗೆ ರಕ್ಷಣೆ ಇಲ್ಲದಂತಾಗಿದೆ. ಹೀಗಾಗಿ ಶಾಸಕರು ಮತ್ತು ಅವರ ಬೆಂಬಲಿಗರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಕಳೆದ ನಾಲ್ಕು ವರ್ಷದಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ನಡೆದಿರುವ ಅಕ್ರಮ ಕಾಮಗಾರಿಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next