ಹೈದರಾಬಾದ್: ರಸ್ತೆ ಬದಿಯ ಸ್ಟಾಲ್ ಒಂದರಲ್ಲಿ ಮೊಮೊಸ್ ಸೇವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು ಇಪ್ಪತ್ತು ಮಂದಿ ಅಸ್ವಸ್ಥರಾಗಿರುವ ಘಟನೆ ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿ ಸೋಮವಾರ(ಅ.28) ನಡೆದಿರುವುದಾಗಿ ವರದಿಯಾಗಿದೆ.
ಬಂಜಾರಾ ಹಿಲ್ಸ್ ನ ನಂದಿನಗರದಲ್ಲಿರುವ ರಸ್ತೆ ಬದಿಯ ಫುಡ್ ಸ್ಟಾಲ್ ನಲ್ಲಿ ಕಳೆದ ಶುಕ್ರವಾರ ಹಲವು ಮಂದಿ ಮೊಮೊಸ್ ಸವಿದಿದ್ದಾರೆ ಇದಾದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಪರಿಣಾಮ ಓರ್ವ ಮಹಿಳೆ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ, ಉಳಿದ ಇಪ್ಪತ್ತು ಮಂದಿ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈ ಕುರಿತು ಬಂಜಾರ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು. ಆಹಾರ ಮಳಿಗೆ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅಲ್ಲದೆ ಘಟನೆಗೆ ಸಂಬಂಧಿಸಿ ಸ್ಥಳೀಯ ನಾಗರಿಕ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆಸ್ಪತ್ರೆಗೆ ದಾಖಲಿಗಿದ್ದ ಹೆಚ್ಚಿನವರು ಹೊಟ್ಟೆ ನೋವು, ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದ್ದು ಇನ್ನೊಂದೆಡೆ ಆಹಾರ ಮಳಿಗೆಯಿಂದಲೂ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಿಕೊಡಲಾಗಿದೆ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: Army Dog Phantom: ಉಗ್ರರ ಕಾರ್ಯಾಚರಣೆ ವೇಳೆ ವೀರ ಮರಣವನ್ನಪ್ಪಿದ ಶ್ವಾನ ʼಫ್ಯಾಂಟಮ್ʼ