Advertisement

Siddapura: ಮಂಗನಕಾಯಿಲೆಗೆ ಮಹಿಳೆ ಬಲಿ

11:40 AM Feb 26, 2024 | Team Udayavani |

ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆಗೆ ಎರಡನೇ ಬಲಿಯಾಗಿದೆ.

Advertisement

ಕೊರ್ಲಕ್ಯೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 60ವರ್ಷದ ಮಹಿಳೆ ಭಾನುವಾರ ರಾತ್ರಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮೂರು ದಿನದ ಹಿಂದೆ ಪುನಃ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಳು.

ಈ ಮೂಲಕ ತಾಲೂಕಿನಲ್ಲಿ ಒಂದೇ ವಾರದಲ್ಲಿ ಇಬ್ಬರು ಮಂಗನ ಕಾಯಿಲೆಯಿಂದ ಸಾವನ್ನಪ್ಪಿದಂತಾಗಿದೆ.

ತಾಲೂಕಿನಲ್ಲಿ ಇಲ್ಲಿಯವರೆಗೆ 43 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next