Advertisement

ಮಹಿಳೆಯರಿಗೆ ಸೂಕ್ತ  ಪ್ರೋತ್ಸಾಹ ಅಗತ್ಯ

05:38 PM May 05, 2018 | Team Udayavani |

ಚಿಕ್ಕೋಡಿ: ಮಹಿಳೆಯರ ಪ್ರತಿಭೆ, ಸಾಮರ್ಥ್ಯಗಳನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡುವುದರೊಂದಿಗೆ ಮಹಿಳೆಯರಿಗೆ ಸಾಮಾಜಿಕ ಸ್ಥಾನಮಾನ ನೀಡುವುದು ಅತ್ಯವಶ್ಯಕವಾಗಿದೆ ಎಂದು ನಿಪ್ಪಾಣಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆ ಹೇಳಿದರು.

Advertisement

ಶುಕ್ರವಾರ ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಸಿದ್ನಾಳ ಗ್ರಾಮದಲ್ಲಿ ನಡೆದ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ನೆರೆದಿದ್ದ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದೆಲ್ಲೆಡೆ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬಿ ಬದುಕಿಗಾಗಿ ಸ್ವಯಂ ಉದ್ಯೋಗ, ಆರೋಗ್ಯ ರಕ್ಷಣೆ, ಆಶ್ರಯ ಇತ್ಯಾದಿ ಯೋಜನೆಗಳೊಟ್ಟಿಗೆ ಕ್ಷೇತ್ರದುದ್ದಕ್ಕೂ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಮಹಿಳಾ ಪರ ಚಿಂತನೆಗಳನ್ನು ಹಾಗೂ ಅವರ ಸಬಲೀಕರಣಕ್ಕಾಗಿ ಸುಮಾರು ಐದು ವರ್ಷಗಳಿಂದ ಶ್ರಮಿಸುತ್ತಾ ಬಂದಿದ್ದೇನೆ ಎಂದರು.

ಕ್ಷೇತ್ರದ ಮಹಿಳೆಯರಿಗಿರುವ ಎಲ್ಲ ಮೂಲಭೂತ ಹಾಗೂ ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಲು ಸದಾ ಕಟಿಬದ್ಧವಿದ್ದು, ಕ್ಷೇತ್ರಕ್ಕೆ ಅ ಧಿಕ ವೆಚ್ಚದಲ್ಲಿ ಅನುದಾನ ತಂದು ನಿಪ್ಪಾಣಿ ಮತಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪ ಮಾಡಲಾಗಿದೆ. ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಗ್ರಾಮಗಳಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದರೊಂದಿಗೆ ಸಮಾಜದಲ್ಲಿರುವ ಪ್ರತಿ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರಲು ಪ್ರಯತ್ನಿಸಲಾಗಿದೆ ಎಂದ ಅವರು, ಮುಂಬರುವ ದಿನಗಳಲ್ಲಿ ಈ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ನನ್ನನ್ನು ಬೆಂಬಲಿಸಿ ಬಹುಮತಗಳಿಂದ ಆಯ್ಕೆ ಮಾಡುವುದರೊಂದಿಗೆ ಇನ್ನು ಹೆಚ್ಚಿನ ಜನಸೇವೆ ಮಾಡಲು ಅವಕಾಶ ನೀಡಬೇಕು ಎಂದರು.

ಗ್ರಾಮೀಣ ಬಿಜೆಪಿ ಮಹಿಳಾ ಅಧ್ಯಕ್ಷೆ ಭಾರತಿ ಅಡದಾಂಡೆ, ಗ್ರಾಪಂ ಅಧ್ಯಕ್ಷ ಕಿಶೋರ ನಲವಡೆ, ಅನ್ನಾಸಾಬ ಅಡದಾಂಡೆ, ಮನೋಹರ ಮಗದುಮ್‌, ಶಿವಾಜಿ ನಲವಡೆ, ಬಾಮು ಪಾಟೀಲ, ಅಭಯ ಪಾಟೀಲ, ವಿಜಯ ಪಾಟೀಲ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next