Advertisement

ಮಹಿಳೆಯರಿಗೆ ಕಾನೂನು ಅರಿವು ಅಗತ್ಯ; ಪರಶುರಾಮ ಕೋಪರ್ಡೆ

06:23 PM Jul 01, 2022 | Team Udayavani |

ರಾಮನಗರ: ಸಂವಿಧಾನ ಮತ್ತು ಕಾನೂನಿನ ಪ್ರಕಾರ ಸರ್ವರೂ ಸಮಾಜದಲ್ಲಿ ಸಮಾನರು. ಮಹಿಳೆಯರ ಮೇಲೆ ನಡೆಯುವ ಶೋಷಣೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬ ಮಹಿಳೆ ಕೂಡ ಕಾನೂನಿನ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವುದು ಅತ್ಯವಶ್ಯವಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ನಿಂಗಪ್ಪ ಪರಶುರಾಮ ಕೋಪರ್ಡೆ ತಿಳಿಸಿದರು.

Advertisement

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ವಕೀಲ ಸಂಘ, ಪೊಲೀಸ್‌ ಇಲಾಖೆ, ಜಿಲ್ಲಾ ಏಡ್ಸ್‌ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮತ್ತು ಮಕ್ಕಳ ರಕ್ಷಣಾ ಘಟಕ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ನಗರದ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ದಮನಿತ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಲ್ಲಿ ಜಾಗೃತಿ ಮೂಡಿಸಿ: ಸಮಾಜದಲ್ಲಿ ಇರುವ ತಮ್ಮ ಹಕ್ಕುಗಳನ್ನು ಪಡೆದುಕೊಂಡು ಜೀವನ ಮಟ್ಟ ಶೋಷಣೆ ಸುಧಾರಿಸಲು ಹಾಗೂ ಅವರಲ್ಲಿರುವ ಭಯ ಹೋಗಲಾಡಿಸಲು ಮಹಿಳೆಯರ ಸುರಕ್ಷತೆ ಹಾಗೂ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದು, ಇವುಗಳ ಸದುಪಯೋಗ ಪಡೆದುಕೊಳ್ಳುವ ಕುರಿತಂತೆ ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳು ಹೆಚ್ಚೆಚ್ಚು ಆಗಬೇಕಿದೆ ಎಂದರು.

ಕಾನೂನು ಅರಿಯಬೇಕು: ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಅನಿತಾ ಮಾತನಾಡಿ, ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ವಿಶೇಷ ಸವಲತ್ತು ನೀಡಿದ್ದು, ಮಹಿಳೆಯರು ಯಾವುದೇ ಕಾನೂನು ನೆರವು ಪಡೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರಿಗೂ ಆಸ್ತಿ ಹಕ್ಕು ಇದೆ. ಇಂದಿಗೂ ಮಹಿಳೆಯರು ತಮ್ಮ ಹಕ್ಕುಗಳನ್ನು ಚಲಾಯಿಸಲು
ಹಿಂದೇಟು ಹಾಕುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಮರ್ಪಕವಾಗಿ ಕಾನೂನು ಅರಿಯಬೇಕು. ಆಗ ಮಾತ್ರ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.

ಜಿಪಂ ಉಪ ಕಾರ್ಯದರ್ಶಿ ಟಿ.ಕೆ. ರಮೇಶ್‌ ಮಾತನಾಡಿ, ಮಹಿಳೆ ಹುಟ್ಟಿನಿಂದ ಸಾವಿನವರೆಗೂ ಒಂದಿಲ್ಲಾ ಒಂದು ಸಮಸ್ಯೆಯಲ್ಲಿ ಎದುರಿಸಬೇಕಾಗಿದ್ದು, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರಾತ್ಮಕವಾಗಿ ಕಾನೂನು ಸವಲತ್ತುಗಳು ಇವೆ. ಹೀಗಾಗಿ ಇವುಗಳ ಬಗ್ಗೆ ತಿಳಿದುಕೊಳ್ಳುವುದು ಅತ್ಯವಶ್ಯವಿದೆ ಎಂದರು.

Advertisement

ಸ್ವ-ಉದ್ಯೋಗದಿಂದ ಸ್ವಾವಲಂಬಿಗಳಾಗಿ: ಸ್ವಯಂ ಉದ್ಯೋಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜದಲ್ಲಿ ದನಿ ಪಡೆಯಲು ಸರ್ಕಾರ ಹಲವಾರು ಯೋಜನೆಗಳನ್ನು ಮಹಿಳೆಯರಿಗಾಗಿ ರೂಪಿಸಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಮಹಿಳೆಯರಿಗೆ. ಸ್ವ-ಉದ್ಯೋಗದಲ್ಲಿ ತೊಡಗಿಸಿಕೊಂಡು ಸ್ವಾವಲಂಬಿ ಗಳಾಗಬೇಕು ಎಂದರು.

ಕಾರ್ಯಾಗಾರದಲ್ಲಿ ಮಹಿಳಾ ಅಭಿವೃದ್ಧಿ ನಿರೀಕ್ಷಕಿ ಬಿ. ಗಾಯಿತ್ರಿದೇವಿ, ಜಿಲ್ಲಾ ಕ್ಷಯ ರೋಗ ಹಾಗೂ ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಕುಮಾರ್‌ ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾ ಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ, ವಕೀಲ ಸಂಘದ ಅಧ್ಯಕ್ಷ ಹನುಮಂತರಾಜು, ಸರೋಜಿನಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳೆಯರು ಹಾಗೂ ಇತರರು ಇದ್ದರು.

ಮಹಿಳೆಯರೇ ಮೊದಲು ಸಂಘಟಿತರಾಗಿ: ನ್ಯಾ. ಅನಿತಾ
ದಮನಿತ ಮಹಿಳೆಯರಿಗೆ ಕಾನೂನು ಅರಿವು ಅಗತ್ಯ. ಕಾನೂನು ಸೇವಾ ಸಮಿತಿಯು ಪ್ರತಿಯೊಬ್ಬರಿಗೂ ಕಾನೂನು ನೆರವು ತೆಗೆದುಕೊಂಡು ಹೋಗುವುದು ಮುಖ್ಯ ಉದ್ದೇಶ. ಮಹಿಳೆಯರು ಮೊದಲು ಸಂಘಟಿತರಾಗಬೇಕು. ಸರ್ಕಾರದ ವಿವಿಧ ಇಲಾಖೆಗಳಡಿ ದೊರೆಯಲಿರುವ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದಲ್ಲಿ ಆರ್ಥಿಕವಾಗಿ ಸಬಲರಾಗಬೇಕಿದೆ. ನೊಂದ ಮಹಿಳೆಯರನ್ನು ಸಾಂತ್ವಾನಗೊಳಿಸುವಂತ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶೆ ಅನಿತಾ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next