Advertisement

MP Prajwal Revanna ವಿರುದ್ಧ ಮಹಿಳೆಯರು ಕೆಂಡ

11:06 PM Apr 28, 2024 | Team Udayavani |

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳೆಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ಪ್ರಜ್ವಲ್‌ ಅವರನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಮಹಿಳಾ ಘಟಕದ ಸದಸ್ಯರು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿ (ಡಿಜಿಪಿ ಕಚೇರಿ)ಬಳಿ ಹಾಗೂ ರೇಸ್‌ಕೋರ್ಸ್‌ ರಸ್ತೆಯ ಗಾಂಧಿ ಪ್ರತಿಮೆ ಸಮೀಪ ರವಿವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಡಿಜಿಪಿ ಕಚೇರಿ ಮುಂದೆ ಸೇರಿದ ನೂರಾರು ಕಾಂಗ್ರೆಸ್‌ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಡಿಜಿ-ಐಜಿಪಿಗೆ ದೂರು ಕೂಡ ಸಲ್ಲಿಸಿದರು.

ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆ ಬಳಿ ನಡೆದ ಪ್ರತಿ ಭಟನೆಯಲ್ಲಿ ಪ್ರಜ್ವಲ್‌ ಪ್ರತಿಕೃತಿಯನ್ನು ದಹಿಸಲಾಯಿತು. ದೇವೇಗೌಡ, ಕುಮಾರಸ್ವಾಮಿ ಮುಖವಾಡ ಹಾಕಿ ಅಣಕು ಪ್ರದರ್ಶನ ನಡೆಸಿದರು. ದೇವೇ ಗೌಡರ ಕುಟುಂಬವನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು.

ಪೊಲೀಸ್‌ ಮಹಾನಿರ್ದೇಶಕರಿಗೂ ದೂರು
2 ಸಾವಿರಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ವೀಡಿಯೋ ಚಿತ್ರೀಕರಣ ಮಾಡಿ ದೌರ್ಜನ್ಯವೆಸಗಿರುವ ಕುರಿತು ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ಕ್ರಮ ಕೋರಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ನಾಯಕರು ಪೊಲೀಸ್‌ ಮಹಾ ನಿರ್ದೇಶಕರಿಗೆ ರವಿವಾರ ದೂರು ನೀಡಿದ್ದಾರೆ.

Advertisement

ಪ್ರಜ್ವಲ್‌ ವಿರುದ್ಧ ಮಹಿಳಾ ಕಾಂಗ್ರೆಸ್‌ ಗರಂ
ಇತ್ತ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಹಿಳಾ ಕಾಂಗ್ರೆಸ್‌ ನಾಯಕಿಯರು, ಪ್ರಜ್ವಲ್‌ ರೇವಣ್ಣ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಕವಿತಾ ರೆಡ್ಡಿ ಮಾತನಾಡಿ, ಮಾಜಿ ಪ್ರಧಾನಿ ಕುಟುಂಬದ ಸದಸ್ಯ ಪ್ರಜ್ವಲ್‌ ರೇವಣ್ಣ ಮಾಡಿರುವ ಈ ಹೀನ ಕೃತ್ಯ ಖಂಡನಿಯ.

ಇಂತಹ ಕುಟುಂಬದ ಸದಸ್ಯ ಯಾವುದೇ ಕಾನೂನಿನ ಭಯ ಇಲ್ಲದೆ ಜರ್ಮನಿಗೆ ಹಾರಿ ಹೋಗಿದ್ದಾನೆ. ಇವರಿಂದ ಶೋಷಣೆಗೆ ಒಳಗಾದ ಮಹಿಳೆಯರನ್ನು ಹೇಗೆ ರಕ್ಷಣೆ ಮಾಡುವುದು ಎನ್ನುವುದೇ ಚಿಂತೆಯಾಗಿದೆ. ಪ್ರಜ್ವಲ್‌ ಮುಸ್ಲಿಂ ಆಗಿದ್ದರೆ ಪ್ರಧಾನಿ ಮಾತನಾಡುತ್ತಿದ್ದರು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next