ಧಾರವಾಡ: ಕುಮಾರೇಶ್ವರ ನಗರದಲ್ಲಿ ಬಹುಮಹಡಿ ಕಟ್ಟಡ ದುರಂತ ನಡೆದ ಸ್ಥಳದಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ ನಡೆಸಲಾಗುತ್ತಿದ್ದು , ಶುಕ್ರವಾರ ಮಹಿಳೆಯೊಬ್ಬರನ್ನು ರಕ್ಷಿಸಲಾಗಿದೆ. ಇದುವರೆಗೆ ಒಟ್ಟು 62 ಮಂದಿಯನ್ನು ರಕ್ಷಿಸಲಾಗಿದೆ. ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 14 ಕ್ಕೇರಿದೆ.
ಹೊನ್ನಮ್ಮ ಎನ್ನುವ ಮಹಿಳೆಯನ್ನು ಅವಶೇಷಗಳಡಿಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಇನ್ನೂ ಎರಡು ದಿನ ಕಾರ್ಯಾಚರಣೆ ಮುಂದುವರಿ ಯುವ ನಿರೀಕ್ಷೆ ಇದ್ದು, ಈಗ ಕಟ್ಟಡದ ಅವಶೇಷಗಳನ್ನು ದೈತ್ಯ ಯಂತ್ರಗಳಿಂದ ಒಡೆದು ತೆರವುಗೊಳಿಸಲಾಗುತ್ತಿದೆ.
ಕಟ್ಟಡದ ಅವಶೇಷಗಳಡಿ ಇನ್ನೂ ಕೆಲ ಜನರು ಇರುವ ಸಾಧ್ಯತೆ ಇದ್ದು ಜಾಗರೂಕತೆಯಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಪರಿಶೀಲಿಸಿದ್ದರು.
ಮೂರು ಅಂತಸ್ತಿಗೆ ಪರವಾನಗಿ ಪಡೆದು ಆರು ಅಂತಸ್ತುಗಳನ್ನು ನಿರ್ಮಿಸುತ್ತಿದ್ದ ಕಟ್ಟಡವೊಂದು
ಮಂಗಳವಾರ ಮಧ್ಯಾಹ್ನ ದಿಢೀರ್‌ನೆ ಕುಸಿದು ಬಿದ್ದು ದುರಂತ ಸಂಭವಿಸಿತ್ತು.