Advertisement

ಮಹಿಳೆಯರಿಗೂ ಸಮಾನ ಅವಕಾಶ ಬೇಕು: ವೀಣಾ ಅಚ್ಚಯ್ಯ

01:00 AM Mar 11, 2019 | Team Udayavani |

ಮಡಿಕೇರಿ: ದೇಶದ ಮಹಿಳೆಯರು ಇಂದು ಸಾಧನೆಯ ಶಿಖರವನ್ನೇರುವ ಮೂಲಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ರಾಜಕೀಯ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಕಲ್ಪಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್‌ ಸದಸ್ಯೆ ವೀಣಾಅಚ್ಚಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.

Advertisement

ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್‌ ವತಿಯಿಂದ ನಗರದ ಕೂರ್ಗ್‌ ಕಮ್ಯುನಿಟಿ ಹಾಲ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
  ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ‌ ಕೆ.ಕೆ.ಮಂಜುನಾಥ್‌ ಕುಮಾರ್‌ ಮಾತನಾಡಿ, ಒಬ್ಬ ಪುರುಷ ಏನೇ ಸಾಧನೆ ಮಾಡಿದರು ಆತನ ಸಾಧನೆಯ ಹಿಂದೆ ಮಹಿಳೆಯ ಪಾತ್ರವೂ ಇರುತ್ತದೆ ಎಂದು ಅಭಿಪ್ರಾಯಪಟ್ಟರು.  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಮಾತನಾಡಿ, ಹಿಂದಿನ ಕಾಲದಲ್ಲಿ ಮಹಿಳೆಯರು ಎದುರಿಸುತ್ತಿದ್ದ ಸವಾಲುಗಳಿಗೂ ಇಂದು ಎದುರಿಸುತ್ತಿರುವ ಸವಾಲುಗಳಿಗೂ ಸಾಕಷ್ಟು ವ್ಯತ್ಯಾಸವಿದೆ ಎಂದರು. ಮಹಿಳೆಯರಿಗೆ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಹೊಸ ಹೊಸ ಸವಾಲುಗಳು ಎದುರಾಗುತ್ತಿದ್ದು, ಪ್ರತಿಯೊಂದನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೆçರ್ಯವನ್ನು ಬೆಳೆಸಿಕೊಂಡು ಸಾಧನೆಯ ಹಾದಿಯಲ್ಲಿ ಸಾಗಬೇಕೆಂದರು.

 ಹೆಣ್ಣು ತನ್ನ ಹಕ್ಕುಗಳ ಬಗ್ಗೆ ಜಾಗೃತಳಾಗಬೇಕು ಮತ್ತು ಹೋರಾಟ ಮನೋಭಾವವನ್ನು ಬೆಳೆಸಿಕೊಳ್ಳುವ ಮೂಲಕ ತನ್ನ ಹಕ್ಕನ್ನು ಪಡೆದುಕೊಳ್ಳಬೇಕೆಂದು ಚಂದ್ರಕಲಾ ಕರೆ ನೀಡಿದರು. ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಸಲಹೆ ನೀಡಿದ ಅವರು ಮಹಿಳೆಯರು ಹಾಗೂ ಪುರುಷರನ್ನು ಪ್ರತಿಯೊಬ್ಬರು ಸಮಾನ ರೀತಿಯಲ್ಲಿ ಗೌರವಿಸಬೇಕೆಂದರು.   ಕಾಂಗ್ರೆಸ್‌ ಪಕ್ಷ ಯಾವುದೇ ಜಾತಿಗೆ ಸೀಮಿತವಾಗಿರದೆ ಎಲ್ಲಾ ವರ್ಗದ ಮಹಿಳೆಯರಿಗೆ ಅನೇಕ ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ ಎಂದು ಚಂದ್ರಕಲಾ ಹೇಳಿದರು. ‌ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾದ ಸುರಯ್ಯ ಅಬ್ರಾರ್‌ ಕಾಂಗ್ರೆಸ್‌ ಪಕ್ಷದ ಬಲವರ್ಧನೆಯಲ್ಲಿ ಮಹಿಳಾ ಕಾರ್ಯಕರ್ತರ ಪಾತ್ರ ಪ್ರಮುಖವೆಂದು ಶ್ಲಾ ಸಿದರು.  ಆ್ಯೆತ್ಲೆಟಿಕ್‌ ಸ್ಪರ್ಧೆ ವಿಜೇತೆ  ವಿಶಾಲಾಕ್ಷಿ, ಮಡಿಕೇರಿಯ ಪ್ರಥಮ ಮಹಿಳಾ ಆಟೋಚಾಲಕಿ ಪಾಂಡನ ಶೈಲಜಾ ಹಾಗೂ ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ದಿ.ಬಿ.ಟಿ.ಪ್ರದೀಪ್‌ ಅವರ ಪತ್ನಿ ಸುಮನ್‌ ಪ್ರದೀಪ್‌ ಅವರನ್ನು ಗೌರವಿಸಲಾಯಿತು.  ಕೆಪಿಸಿಸಿ ಕಾರ್ಯದರ್ಶಿ ತಾರಾ ಅಯ್ಯಮ್ಮ, ಶೈಲಾ ಕುಟ್ಟಪ್ಪ, ಜಿ.ಪಂ ಸದಸ್ಯೆ ಸುನೀತ, ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಅಮೀನಾ, ಜಿ.ಪಂ ಮಾಜಿ ಅಧ್ಯಕ್ಷೆ ದೀರ್ಘ‌ಕೇಶಿ ಶಿವಣ್ಣ, ಪ್ರಮುಖರಾದ ಮಂಜುಳಾ ಉಪಸಿœತರಿದ್ದರು. 

 ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಸಮಿತಿ ವತಿಯಿಂದ ಮಹಿಳಾ ಅಧಿಕಾರ ಯಾತ್ರೆ”ಗೆ ಸುರಯ್ಯ ಅಬ್ರಾರ್‌ ಚಾಲನೆ ನೀಡಿದರು. 

Advertisement

Udayavani is now on Telegram. Click here to join our channel and stay updated with the latest news.

Next