ಹೊಸದಿಲ್ಲಿ: ಭಾರತದ ವನಿತಾ ಕ್ರಿಕೆಟ್ ತಂಡ ಇದೇ ತಿಂಗಳು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ತಲಾ 3 ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿಯನ್ನು ಆಡಲಾಗುವುದು.
ಸರಣಿಯ ಎಲ್ಲ ಪಂದ್ಯಗಳು ಮಿರ್ಪುರದ “ಶೇರ್ ಎ ಬಾಂಗ್ಲಾ ನ್ಯಾಶನಲ್ ಸ್ಟೇಡಿಯಂ’ನಲ್ಲಿ ನಡೆಯಲಿವೆ. ಇದಕ್ಕಾಗಿ ಭಾರತ ತಂಡಗಳನ್ನು ಪ್ರಕಟಿಸಲಾಗಿದೆ. ಹರ್ಮನ್‌ಪ್ರೀತ್ ಕೌರ್ ನಾಯಕಿ, ಸ್ಮತಿ ಮಂಧನಾ ಉಪನಾಯಕಿಯಾಗಿದ್ದಾರೆ.
ರಿಚಾ ಘೋಷ್, ಶಿಖಾ ಪಾಂಡೆ, ರೇಣುಕಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್, ರಾಧಾ ಯಾದವ್ ಮೊದಲಾದ ಪ್ರಮುಖ ಆಟಗಾರರನ್ನು ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ. ಎಡಗೈ ಸ್ಪಿನ್ನರ್‌ಗಳಾದ ಅನುಷಾ ಬಾರೆಡ್ಡಿ ಮತ್ತು ರಾಶಿ ಕನೋಜಿಯಾ ಮೊದಲ ಸಲ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಕೇರಳದ ಮಿನ್ನು ಮಣಿ ಟಿ20ಯಲ್ಲಿ ಮಾತ್ರ ಅವಕಾಶ ಪಡೆದಿದ್ದಾರೆ. ತಂಡಕ್ಕೆ ಮರಳಿದವರೆಂದರೆ ಪ್ರಿಯಾ ಪೂನಿಯ ಮತ್ತು ಮೋನಿಕಾ ಪಟೇಲ್.
ಭಾರತ ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮತಿ ಮಂಧನಾ (ಉಪನಾಯಕಿ), ದೀಪ್ತಿ ಶರ್ಮ, ಶಫಾಲಿ ವರ್ಮ, ಜೆಮಿಮಾ ರೋಡ್ರಿಗಸ್, ಯಾಸ್ತಿಕಾ ಭಾಟಿಯಾ, ಹಲೀìನ್ ದೇವಲ್, ದೇವಿಕಾ ವೈದ್ಯ, ಉಮಾ ಚೆಟ್ರಿ, ಅಮನ್‌ಜೋತ್ ಕೌರ್, ಎಸ್. ಮೇಘನಾ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ಅಂಜಲಿ ಸರ್ವಾಣಿ, ಮೋನಿಕಾ ಪಟೇಲ್, ರಾಶಿ ಕನೋಜಿಯಾ, ಅನುಷಾ ಬಾರೆಡ್ಡಿ, ಮಿನ್ನು ಮಣಿ.
ಭಾರತ ಏಕದಿನ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮತಿ ಮಂಧನಾ (ಉಪನಾಯಕಿ), ದೀಪ್ತಿ ಶರ್ಮ, ಶಫಾಲಿ ವರ್ಮ, ಜೆಮಿಮಾ ರೋಡ್ರಿಗಸ್, ಯಾಸ್ತಿಕಾ ಭಾಟಿಯಾ, ಹಲೀìನ್ ದೇವಲ್, ದೇವಿಕಾ ವೈದ್ಯ, ಉಮಾ ಚೆಟ್ರಿ, ಅಮನ್‌ಜೋತ್ ಕೌರ್, ಪ್ರಿಯಾ ಪೂನಿಯ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ಅಂಜಲಿ ಸರ್ವಾಣಿ, ಮೋನಿಕಾ ಪಟೇಲ್, ರಾಶಿ ಕನೋಜಿಯಾ, ಅನುಷಾ ಬಾರೆಡ್ಡಿ, ಸ್ನೇಹ್ ರಾಣಾ.