Advertisement

ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಡಿಸಿ

04:01 PM Mar 09, 2021 | Team Udayavani |

ಕೊಪ್ಪಳ: ಮಹಿಳೆಯರು ಸಾಮಾಜಿಕವಾಗಿಪ್ರಗತಿ ಸಾಧಿಸಬೇಕಾದರೆ ಸ್ವಾವಲಂಬಿ ಬದುಕು ಕಟ್ಟಿಕೊಂಡಾಗ ಮಾತ್ರ ಸಾಧ್ಯ ಎಂದು ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಹೇಳಿದರು.

Advertisement

ಜಿಲ್ಲಾಡಾಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತದಿಂದ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ರಾಜಕೀಯ, ಉದ್ಯಮ, ಆಡಳಿತ ಕ್ಷೇತ್ರಗಳಲ್ಲಿ ಮುಂದೆ ಬಂದರೆ ಸಾಮಾಜಿಕವಾಗಿ ಸದೃಢರಾಗಲು ಸಾಧ್ಯ. ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗಬೇಕು. ಈ ಸಮಾಜದಲ್ಲಿ ಆರ್ಥಿಕತೆಗೆ ತಕ್ಕಂತೆ ಬೆಲೆ ಸಿಗುವುದರಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ ಎಂದರು.

ಮಹಿಳೆಯರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಹೆಣ್ಣಿನ ಬಗ್ಗೆಇರುವ ತಪ್ಪು ಭಾವನೆಗಳು ತೊಲಗುತ್ತವೆ.ಸುತ್ತಮುತ್ತಲಿನ ವಾತಾವರಣದಲ್ಲಿ ನಿಮ್ಮ ಸ್ವಾವಲಂಬಿ ಜೀವನಸ್ಫೂರ್ತಿಯಾಗಲಿ. ಸರ್ಕಾರದ ಅನೇಕ ಯೋಜನೆಗಳು ಮತ್ತು ಕಾಯ್ದೆಗಳು ಮಹಿಳೆ ಪರವಾಗಿದ್ದು, ಅವುಗಳನ್ನು ಉಪಯೋಗಿಸಿಕೊಂಡು ಮುಂದೆ ಬನ್ನಿ ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಉಪ ನಿರ್ದೇಶಕಿ ಅಕ್ಕಮಹಾದೇವಿ ಅವರು ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾಸಾಧಕರು ಹಾಗೂ ಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್‌ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಈರಪ್ಪ ಕುಡಗುಂಟಿ, ಪಾಯಲ್‌ ಸುರಳ್ಕರ್‌, ಸಾಮಾಜಿಕ ಕಾರ್ಯಕರ್ತೆ ದಿವ್ಯ ಜೋಗಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಅಲಕನಂದಾ ಮಳಗಿ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಇಲಾಖೆಗಳ ಅ ಧಿಕಾರಿಗಳು ಹಾಗೂ ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಸರ್ಕಾರ :

Advertisement

ಕಾರಟಗಿ: ತಾಲೂಕಿನ ಹುಳ್ಕಿಹಾಳ ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆಯಡಿ ನಡೆಯುತ್ತಿರುವ ಜೀರಾಳ ಕೆರೆ ಹೊಳೆತ್ತುವ ಸ್ಥಳದಲ್ಲಿ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಪಂ ಸದಸ್ಯ ಬಸವರಾಜ ಗೋಮರ್ಸಿ ಮಾತನಾಡಿ, ಮಹಿಳೆಯರು ಪುರುಷರಷ್ಟೇ ಸರಿಸಮಾನರು ಸರ್ಕಾರಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸುತ್ತಿದೆ. ಮಹಿಳೆ ದೇಶದ ಶಕ್ತಿ. ಅವರನ್ನು ಗೌರವಿಸುವ ಕೆಲಸ ಮಾಡಬೇಕು. ಬಲಿಷ್ಠರಾಷ್ಟ್ರ ನಿರ್ಮಾಣಕ್ಕೆ ಮಹಿಳೆಯರ ಪಾತ್ರ ಮಹತ್ವದ್ದು ಎಂದರು.

ಗ್ರಾಪಂ ಅಧ್ಯಕ್ಷೆ ಚಂದ್ರಕಲಾ ನಾಗಪ್ಪ, ಉಪಾಧ್ಯಕ್ಷ ದೇವರಾಜ್‌,ಪಿಡಿಒ ಡಾ| ವೆಂಕಟೇಶ, ಸದಸ್ಯರಾದ ಭೋಗೇಶ ಹಗೇದಾಳ,ರಾಘವೇಂದ್ರ ನಾಯಕ್‌ ಸೇರಿದಂತೆ ನೂರಾರು ಕೂಲಿಕಾರರು ಇದ್ದರು. ತಾಲೂಕಿನ ಈಳಿಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಮಹಿಳಾ ದಿನ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಪರಶುರಾಮ್‌ ಗಡ್ಡಿ, ಶಿಕ್ಷಕಿಯರಾದ ಸಂಗೀತ ಕಂದಗಲ್‌, ಸವಿತಾ ಪಟಗಾರ, ಬಿಸಿಯೂಟ ಅಡುಗೆ ಸಿಬ್ಬಂದಿಗಳಾದ ಕೊರ್ರಮ್ಮ, ಈರಮ್ಮ, ಅಂಬಮ್ಮ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next