Advertisement

ಹೆಣ್ಣು ಮಕ್ಕಳಿಗೆ ಬೇಕಿದೆ ಕಡ್ಡಾಯ ಶಿಕ್ಷಣ

01:28 PM Mar 09, 2021 | Team Udayavani |

ಚಿತ್ರದುರ್ಗ: ಹೆಣ್ಣು ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಇದೆ. ಯಾರೂ ಕೂಡಾ ಶಿಕ್ಷಣವಂಚಿತರಾಗದಂತೆ ನೋಡಿಕೊಳ್ಳಬೇಕುಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಹೇಳಿದರು.

Advertisement

ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಮಕ್ಕಳ ರಕ್ಷಣಾ ಘಟಕದಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರತಿ ಹೆಣ್ಣು ಮಕ್ಕಳು ಶಿಕ್ಷಣ ಪಡೆದಾಗ ಮಾತ್ರ ತನ್ನ ಜೀವನ ತಾನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಸಾಧನೆ ಮಾಡುವಲ್ಲಿಯಶಸ್ವಿಯಾಗುತ್ತಾರೆ. ಸಾವಿತ್ರಿ ಬಾಯಿಫುಲೆ ಹೋರಾಟ, ಶ್ರಮದ ಪ್ರತಿಫಲವೇಇಂದು ಹೆಣ್ಣು ಮಕ್ಕಳು ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿದೆ ಎಂದರು.

ಇತ್ತಿಚೀನ ದಿನಗಳಲ್ಲಿ ಹೆಣ್ಣಿನ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ, ಶೋಷಣೆ, ದೌರ್ಜನ್ಯ ನಡೆಯುತ್ತಿವೆ. ಇವುಗಳ ವಿರುದ್ಧ ಹೋರಾಡುವ ಮೂಲಕ ಆಕೆಗೆ ಎಲ್ಲವನ್ನೂ ಸಾಧಿಸುವ ಶಕ್ತಿ ಇದೆ ಎಂದು ತೋರಿಸಿಕೊಡುತ್ತಿದ್ದಾಳೆ. ಮಹಿಳೆ ಅಬಲೆ ಅಲ್ಲ ಸಬಲೆ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಮಾತನಾಡಿ, ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯಸರ್ಕಾರಗಳು ಅನೇಕ ಯೋಜನೆಗಳನ್ನುಜಾರಿಗೆ ತಂದಿದೆ. ಪ್ರತಿಯೊಬ್ಬ ಪೋಷಕರುಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

Advertisement

ಪ್ರತಿಯೊಬ್ಬ ಮಹಿಳೆಯಲ್ಲಿ ಸಾಸುವ ಛಲ ಇರುತ್ತದೆ. ಅದನ್ನು ಶಿಕ್ಷಣದ ಮೂಲಕ ಸಾಕಾರಗೊಳಿಸಿಕೊಳ್ಳಬೇಕು. ಪ್ರತಿಯೊಬ್ಬ ಪುರುಷನು ಮಹಿಳೆಯರನ್ನು ಗೌರವಿಸಿದರೇ ಅದುವೇ ಸಮಾಜಕ್ಕೆ ನೀಡುವ ಕೊಡುಗೆಯಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ಬಾಲ್ಯ ವಿವಾಹಕಾಯ್ದೆ ಪ್ರಕಾರ 18 ವರ್ಷಕ್ಕಿಂತ ಕಡಿಮೆ ಇರುವ ಹೆಣ್ಣು ಮಗುವಿಗೆ ಮದುವೆ ಮಾಡುವುದು ಮತ್ತು ಈ ವಿವಾಹದಲ್ಲಿ ಭಾಗಿಯಾಗುವ ಪ್ರತಿಯೊಬ್ಬರು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧಿಗಳು ಆಗುತ್ತಾರೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಪ್ರತಿಯೊಬ್ಬರು ಪೊಲೀಸ್‌ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಜಿಪಂ ಸಿಇಒ ಡಾ.ಕೆ.ನಂದಿನಿ ದೇವಿ ಮಾತನಾಡಿ, ಹೆಣ್ಣು ಮಕ್ಕಳು ಪ್ರಶ್ನಿಸುವಸ್ವಭಾವ ಬೆಳೆಸಿಕೊಳ್ಳಬೇಕು. ಮನೆಯಲ್ಲಿ ಗಂಡು ಮಕ್ಕಳಿಗೆ ಒಂದು, ಹೆಣ್ಣು ಮಕ್ಕಳಿಗೆ ಒಂದು ರೀತಿಯಲ್ಲಿ ನೋಡುವ ಭಾವನೆ ಬಿಡಬೇಕು ಎಂದರು.

ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಹಾಗೂ ನ್ಯಾಯವಾದಿ ಡಿ.ಕೆ.ಶೀಲ ಉಪನ್ಯಾಸ ನೀಡಿದರು. ಕ್ರೀಡಾ, ನಾವೀನ್ಯತೆ, ಶೈಕ್ಷಣಿಕ, ಕಲೆ, ಸಂಗೀತ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಾಧನೆಗೈದ ಮಕ್ಕಳಿಗೆ ಸನ್ಮಾನಿಸಲಾಯಿತು.ಪೋಷಣ್‌ ಪಕ್ವಾಡ್‌ ಕಾರ್ಯಕ್ರಮಕ್ಕೆ ಚಾಲನೆನೀಡಿದರು. ಹಿರಿಯೂರು ತಾಪಂ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಜಿಪಂ ಸದಸ್ಯೆ ಚಂದ್ರಿಕಾಶ್ರೀನಿವಾಸ್‌, ಸ್ತ್ರೀ ಶಕ್ತಿ ಒಕ್ಕೂಟ ಅಧ್ಯಕ್ಷೆಕೊಲ್ಲಿಲಕ್ಷ್ಮೀ, ತಾಪಂ ಸದಸ್ಯೆ ಚಂದ್ರಕಲಾಸುರೇಶ್‌, ಚಿತ್ರ ಡಾನ್‌ಬಾಸ್ಕೊ ಸಂಸ್ಥೆಯ ಎಚ್‌ .ಸಿ. ಮಂಜುನಾಥ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ಎಸ್‌. ರಾಜಾನಾಯಕ್‌, ಜಿಪಂ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next