Advertisement

ಮಹಿಳಾ ಸಶಕ್ತೀಕರಣದ ಮೂಲಕ ಸಶಕ್ತ ರಾಷ್ಟ್ರ: ನಳಿನ್‌

02:25 AM Mar 09, 2022 | Team Udayavani |

ಮಂಗಳೂರು: ಹೆಣ್ಣನ್ನು ಮಾತೃ ಸ್ವರೂಪಿಯಾಗಿ ಕಾಣುವ ಈ ದೇಶದಲ್ಲಿ ಅವಳಿಗೆ ಸ್ವಾತಂತ್ರ್ಯದೊಂದಿಗೆ ಸಮಾನತೆಗೂ ಹೆಚ್ಚಿನ ಗೌರವವನ್ನು ನೀಡಲಾಗಿದೆ. ಮಹಿಳಾ ಸಶಕ್ತೀಕರಣದ ಮೂಲಕ ಉತ್ತಮ ಸಮಾಜ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ನಾಂದಿ ಹಾಡಲಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

Advertisement

ದ.ಕ. ಜಿಲ್ಲಾಡಳಿತ, ಜಿ.ಪಂ., ರಾಜ್ಯ ಮಹಿಳಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಜರಗಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಕಾನೂನು ಅರಿವು ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರ ಆರೋಗ್ಯ ದೃಷ್ಟಿಯಿಂದ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡಿರುವ ಪ್ರಧಾನಿಯವರು ಬೇಟಿ ಬಚಾವೋ ಬೇಟಿ ಪಡಾವೋದಂತಹ ಯೋಜನೆ ಮೂಲಕ ಮಹಿಳಾ ಸಶಕ್ತೀ ಕರಣಕ್ಕೆ ಇರು ವ ಸಮಸ್ಯೆ ಪರಿಹರಿಸುವ ಯೋಜನೆ ಗಳನ್ನು ಹಮ್ಮಿಕೊಂಡಿದ್ದಾರೆ ಎಂದರು.

ಮುಟ್ಟಿನ ಕಪ್‌ ವಿತರಣೆ
ಜಿ.ಪಂ. ಸಿಇಒ ಡಾ| ಕುಮಾರ್‌ ಮಾತನಾಡಿ, ಪ್ರಧಾನಮಂತ್ರಿ ಕಿರುಆಹಾರ ಸಂಸ್ಕರಣ ಘಟಕ ಯೋಜನೆ  ಗಳ ಜಿಲ್ಲೆಯಲ್ಲಿ 237ಕ್ಕೂ ಹೆಚ್ಚಿನ ಘಟಕಗಳು ಆರಂಭ ಗೊಂಡಿದ್ದು, ಅವುಗಳಲ್ಲಿ ಶೇ. 90ರಷ್ಟು ಮಹಿಳೆ ಯರಿಗೆ ನೀಡಲಾಗಿದೆ. ಮಹಿಳೆ ಯರ ಆರೋಗ್ಯ ದೃಷ್ಟಿ ಯಿಂದ ಮಧ್ಯ ಪ್ರದೇಶದಲ್ಲಿ ಜಾರಿಗೆ ತಂದಿರು ವಂತೆ ಮುಟ್ಟಿನ ಕಪ್‌ ಗಳ ವಿತರಣೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸ ಲಾಗುವುದು ಎಂದು ಹೇಳಿದರು.

ಮೇಯರ್‌ ಪ್ರೇಮಾನಂದ ಶೆಟ್ಟಿ ಮಾತನಾಡಿದರು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲಸಾರ್‌, ಸಂಪನ್ಮೂಲ ವ್ಯಕ್ತಿಗಳಾದ ಗೌರಿ ಹಾಗೂ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಹರಿಣಾಕ್ಷಿ ಉಪಸ್ಥಿತರಿದ್ದರು.
ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಾಪಬೋವಿ ಸ್ವಾಗತಿಸಿ, ಪ್ರಿಯಾ ನಿರೂಪಿಸಿದರು. ವಕೀಲೆ ಗೌರಿ ಅವರು ಮಹಿಳೆ ಮತ್ತು ಕಾನೂನಿಗ ಬಗ್ಗೆ ಮಾಹಿತಿ ನೀಡಿದರು.

Advertisement

ಪ್ರಶಸ್ತಿ ಪ್ರದಾನ
6 ಮಂದಿಗೆ 2021ನೇ ಸಾಲಿನ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ, 6 ಸ್ತ್ರೀಶಕ್ತಿ ಗುಂಪುಗಳಿಗೆ ಆತ್ಯುತ್ತಮ ಸ್ತ್ರೀಶಕ್ತಿ ಗುಂಪು ಪ್ರಶಸ್ತಿ ನೀಡಲಾಯಿತು. ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ 2021-22ನೇ ಸಾಲಿನಲ್ಲಿ 8 ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು. ನರೇಗಾ ಯೋಜನೆಯಡಿ ಅತ್ಯುತ್ತಮ ಕೆಲಸ ನಿರ್ವಹಿಸಿದ 7 ತಾಲೂಕುಗಳ ಒಬ್ಬೊಬ್ಬ ಮಹಿಳೆಯನ್ನು ಸಮ್ಮಾನಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next