Advertisement

Hubballi; ಮಹಿಳಾ ರಾಷ್ಟ್ರೀಯ ಅಂಧರ ಟಿ20 ಕ್ರಿಕೆಟ್ ಟೂರ್ನಿಗೆ ಚಾಲನೆ; ಟ್ರೋಫಿ ಅನಾವರಣ

08:01 PM Jan 07, 2024 | Team Udayavani |

ಹುಬ್ಬಳ್ಳಿ: ಮಹಿಳಾ ರಾಷ್ಟ್ರೀಯ ಅಂಧರ ಟಿ20 ಕ್ರಿಕೆಟ್ ಪಂದ್ಯಾವಳಿಯ 4ನೇ ಆವೃತ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ ಅವರು ರವಿವಾರ ಇಲ್ಲಿನ ಇಂದಿರಾ ಗಾಜಿನ ಮನೆಯಲ್ಲಿ ಟ್ರೋಫಿ ಅನಾವರಣಗೊಳಿಸುವ ಮೂಲಕ ಚಾಲನೆ ನೀಡಿದರು.

Advertisement

ಪಂದ್ಯಾವಳಿಯಲ್ಲಿ ಒಟ್ಟು 16 ತಂಡಗಳು ಪಾಲ್ಗೊಂಡಿದ್ದು, ನಾಲ್ಕು ಗುಂಪುಗಳನ್ನು ರಚಿಸಲಾಗಿದೆ.

ಕರ್ನಾಟಕ, ಜಾರ್ಖಂಡ್, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ಚಂಡೀಗಢ, ತಮಿಳುನಾಡು, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಅಸ್ಸಾಂ, ದೆಹಲಿ, ಕೇರಳ, ರಾಜಸ್ಥಾನ, ಹರಿಯಾಣ ತಂಡಗಳು ಪಾಲ್ಗೊಳ್ಳುತ್ತಿವೆ.

ಅಂತಿಮ ಪಂದ್ಯವು ಜ. 12ರಂದು ದೇಶಪಾಂಡೆ ನಗರದ ಕರ್ನಾಟಕ ಜಿಮಖಾನಾ ಮೈದಾನದಲ್ಲಿ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next