Advertisement
ಇಂದು ನೂತನ ಸಂಸತ್ ಭವನದಲ್ಲಿ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಅವರು ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದರು.
Related Articles
ಇದಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಬದ್ಧತೆ ಮತ್ತು ದೇಶದ ಮಹಿಳೆಯರ ಜನಸಂಖ್ಯೆಗೆ ಅರ್ಹತೆಯನ್ನು ನೀಡುವ ಸಂಕಲ್ಪವನ್ನು ಕುರಿತು ಮಾತನಾಡಿದರು.
Advertisement
ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಹೆಚ್ಚು ಹೆಚ್ಚು ಮಹಿಳೆಯರು ಸೇರಬೇಕೆಂದು ನಾವು ಬಯಸುತ್ತೇವೆ. ದೇಶದಲ್ಲಿ ಮಹಿಳಾ ನೇತೃತ್ವದ ಅಭಿವೃದ್ಧಿ ಪ್ರಕ್ರಿಯೆಯನ್ನು ಜಗತ್ತು ಗುರುತಿಸಿದೆ. ಇದು ಕ್ರೀಡೆಯಿಂದ ಸ್ಟಾರ್ಟ್‌ಅಪ್‌ಗಳವರೆಗೆ ಜೀವನದ ವಿವಿಧ ಆಯಾಮಗಳಲ್ಲಿ ಭಾರತೀಯ ಮಹಿಳೆಯರು ನೀಡಿದ ಕೊಡುಗೆಗಳಿಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮಹಿಳಾ ನೇತೃತ್ವದ ಅಭಿವೃದ್ಧಿಯ ಸಂಕಲ್ಪವನ್ನು ಬಲಪಡಿಸಲು ತಮ್ಮ ಸರ್ಕಾರ “ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತರುತ್ತಿದೆ” ಎಂದು ಹೇಳಿದರು.
“ನಾರಿ ಶಕ್ತಿ ವಂದನ್ ಅಧಿನಿಯಮ್’ ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಸಶಕ್ತಗೊಳಿಸುತ್ತದೆ” ಎಂದು ಹೇಳಿದರು
“ಈ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸುವಂತೆ ನಾನು ಉಭಯ ಸದನಗಳ ಎಲ್ಲಾ ಸದಸ್ಯರನ್ನು ಕೋರುತ್ತೇನೆ” ಎಂದು ಅವರು ಹೇಳಿದರು.