Advertisement

Women’s ಟಿ20 ಭಾರತ-ಆಸ್ಟ್ರೇಲಿಯ ಸರಣಿ ಇಂದಿನಿಂದ

12:12 AM Jan 05, 2024 | Team Udayavani |

ನವೀ ಮುಂಬಯಿ: ಮುಂಬರುವ ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸುವ ನಿಟ್ಟಿನಲ್ಲಿ ಶುಕ್ರವಾರದಿಂದ ಆರಂಭವಾಗುವ ಆರು ಬಾರಿಯ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ವನಿತೆಯರು ಉತ್ತಮ ನಿರ್ವಹಣೆ ನೀಡುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Advertisement

ಆಸ್ಟ್ರೇಲಿಯ ವಿರುದ್ಧ ಇತ್ತೀಚೆಗೆ ಮುಗಿದ 3 ಪಂದ್ಯಗಳ ಏಕದಿನ ಸರಣಿ ಯಲ್ಲಿ 0-3 ಅಂತರದ ಹೀನಾಯ ಸೋಲು ಕಂಡಿದ್ದ ಭಾರತ ಈ ಮೊದಲು ನಡೆದ ಇಂಗ್ಲೆಂಡ್‌ ವಿರುದ್ಧದ ಸರಣಿಯಲ್ಲೂ ಸೋತಿತ್ತು. ಆದರೆ ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ವಿರುದ್ಧ ನಡೆದ ಏಕೈಕ ಟೆಸ್ಟ್‌ನಲ್ಲಿ ಐತಿಹಾಸಿಕ ಗೆಲುವಿನಿಂದ ಆತ್ಮವಿಶ್ವಾಸ ಹೊಂದಿದ್ದ ಭಾರತೀಯ ವನಿತೆಯರು ಟಿ20 ಸರಣಿಯಲ್ಲಾದರೂ ಉತ್ತಮ ಸಾಧನೆ ಮಾಡುವ ಉತ್ಸಾಹದಲ್ಲಿದ್ದಾರೆ.
ಆದರೆ ಏಕದಿನ ಪಂದ್ಯದಂತೆ ಟಿ220 ಪಂದ್ಯದಲ್ಲಿ ಆಸ್ಟ್ರೇಲಿಯ ವನಿತೆಯರು ಅಮೋಘ ನಿರ್ವಹಣೆ ನೀಡುತ್ತಿದ್ದಾರೆ. 2022ರಲ್ಲಿ ನಡೆದ ಐದು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯ 4-1 ಅಂತರದಿಂದ ಜಯಭೇರಿ ಬಾರಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next