Advertisement

England- Australia ಸರಣಿಗೆ ವನಿತಾ ತಂಡ ಪ್ರಕಟ: ರಾಜ್ಯದ ಶುಭಾ ಸತೀಶ್, ಶ್ರೇಯಾಂಕಾಗೆ ಸ್ಥಾನ

05:32 PM Dec 02, 2023 | Team Udayavani |

ಮುಂಬೈ: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವನಿತಾ ತಂಡಗಳ ವಿರುದ್ಧ ತವರಿನಲ್ಲಿ ನಡೆಯಲಿರುವ ಸರಣಿಗೆ ಭಾರತದ ವನಿತಾ ತಂಡವನ್ನು ಪ್ರಕಟಿಸಲಾಗಿದೆ. ಇಂಗ್ಲೆಂಡ್ ವಿರುದ್ಧದ ಮೂರು ಟಿ20 ಮತ್ತು ಒಂದು ಟೆಸ್ಟ್ ಪಂದ್ಯ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಒಂದು ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟಿಸಲಾಗಿದೆ.

Advertisement

ಹರ್ಮನ್ ಪ್ರೀತ್ ಕೌರ್ ಅವರು ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧನಾ ಅವರು ಉಪ ನಾಯಕಿಯಾಗಿದ್ದಾರೆ.

ಭಾರತ ವನಿತಾ ತಂಡವು 2014ರ ಬಳಿ ಇದೇ ಮೊದಲ ಬಾರಿಗೆ ತವರಿನಲ್ಲಿ ಟೆಸ್ಟ್ ಪಂದ್ಯವಾಡುತ್ತಿದೆ. ಡಿಸೆಂಬರ್ 6 ರಿಂದ 10 ರವರೆಗೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯೊಂದಿಗೆ ವನಿತಾ ತಂಡದ ಆಟಗಳು ಪ್ರಾರಂಭವಾಗುತ್ತದೆ.

ಟಿ20 ನಂತರ, ತಂಡಗಳು ಡಿಸೆಂಬರ್ 14 ರಿಂದ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಏಕಮಾತ್ರ ಟೆಸ್ಟ್‌ ಗೆ ಸಜ್ಜಾಗಲಿವೆ. ಬಳಿಕ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯವನ್ನು ಡಿಸೆಂಬರ್ 21 ರಿಂದ ವಾಂಖೆಡೆ ಕ್ರೀಡಾಂಗಣದಲ್ಲಿ ಆಡಲಾಗುತ್ತದೆ.

ಮೊದಲ ಆವೃತ್ತಿಯ ವನಿತಾ ಪ್ರೀಮಿಯರ್ ಲೀಗ್ ನಲ್ಲಿ ಮಿಂಚಿದ್ದ ಎಡಗೈ ಸ್ಪಿನ್ನರ್ ಸೈಕಾ ಇಶಾಕ್ ಅವರು ಮೊದಲ ಬಾರಿಗೆ ರಾಷ್ಟ್ರೀಯ ತಂಡದ ಕರೆ ಪಡೆದಿದ್ದಾರೆ. ಅಲ್ಲದೆ ಕರ್ನಾಟಕದ ಆಲ್ ರೌಂಡರ್ ಶ್ರೇಯಾಂಕಾ ಪಾಟೀಲ್ ಅವರು ಟಿ20 ತಂಡದ ಭಾಗವಾಗಿದ್ದಾರೆ.

Advertisement

ರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ತನ್ನ ಸಮಗ್ರ ಬ್ಯಾಟಿಂಗ್‌ ನಿಂದ ಮಿಂಚಿದ ಕರ್ನಾಟಕದ ಎಡಗೈ ಆಟಗಾರ್ತಿ ಶುಭಾ ಸತೀಶ್ ಜೊತೆಗೆ ಜೂಲನ್ ಗೋಸ್ವಾಮಿಯ ಉತ್ತರಾಧಿಕಾರಿ ಎಂದೇ ಹೆಸರಾದ ಟಿಟಾಸ್ ಸಧು ಅವರು ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ತಂಡಗಳು

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾ), ಸ್ಮೃತಿ ಮಂಧನಾ (ಉ.ನಾ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಅಮನ್‌ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಮನ್ನತ್ ಕಶ್ಯಪ್ ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಧು, ಪೂಜಾ ವಸ್ತ್ರಾಕರ್, ಕನಿಕಾ ಅಹುಜಾ, ಮಿನ್ನು ಮಣಿ.

ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ಗಾಗಿ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾ), ಸ್ಮೃತಿ ಮಂಧನಾ (ವಿಸಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ (ವಿ.ಕೀ), ರಿಚಾ ಘೋಷ್ (ವಿ.ಕೀ), ಸ್ನೇಹ ರಾಣಾ, ಶುಭಾ ಸತೀಶ್, ಹರ್ಲೀನ್ ಡಿಯೋಲ್, ಸೈಕಾ ಇಶಾಕ್, ರೇಣುಕಾ ಸಿಂಗ್ ಠಾಕೂರ್, ಟಿಟಾಸ್ ಸಧು, ಮೇಘನಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್, ಪೂಜಾ ವಸ್ತ್ರಾಕರ್.

Advertisement

Udayavani is now on Telegram. Click here to join our channel and stay updated with the latest news.

Next