ವಿಜಯಪುರ: ಲಸಿಕೆ ಪೂರ್ಣಗೊಳ್ಳದೇ ವಿದ್ಯಾರ್ಥಿನಿಯರಿಗೆ ಕೋವಿಡ್ ಲಸಿಕೆ ನೀಡುವಲ್ಲಿ ಆದ್ಯತೆ ನೀಡದೇ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪರೀಕ್ಷಾ ದಿನಾಂಕ ಘೋಷಣೆ ಮಾಡಿದ್ದನ್ನು ವಿರೋಧಿ ಸಿ ಎಐಡಿಎಸ್‌ಒ ಕಾರ್ಯಕರ್ತರು ಸೋಮವಾರ ನಗರದ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ವಿವಿ ವಿರುದ್ಧ ಹರಿಹಾಯ್ದರು.
ಒಂದೆಡೆ ಸರ್ಕಾರ ಸದ್ಯದ ಪರಿಸ್ಥಿತಿಯಲ್ಲಿ ಆರೋಗ್ಯವೇ ಪ್ರಧಾನ, ಅದುವೇ ನಮ್ಮ ಆದ್ಯತೆ. ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ ನೀಡುವವರೆಗೂ ಆಫ್‌ಲೈನ್ ತರಗತಿ ಹಾಗೂ ಪರೀಕ್ಷೆ ಆರಂಭಿಸುವುದಿಲ್ಲ ಎಂದು ಹೇಳಿತ್ತು. ಇದೀಗ ಮತ್ತೂಂದೆಡೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದ್ದು ವಿದ್ಯಾರ್ಥಿನಿಯರಲ್ಲಿ ಆತಂಕ ಮೂಡಿಸಿದೆ. ಅಲ್ಲದೇ ಲಸಿಕೆ ನೀಡುವ ಪ್ರಕ್ರಿಯೆ ಇನ್ನು ಸಮರ್ಪಕವಾಗಿ ಆರಂಭಗೊಂಡಿಲ್ಲ. ಈ ನಡುವೆ ಸರ್ಕಾರ ಪರೀಕ್ಷೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ. ಹೀಗಿದ್ದೂ ವಿಶ್ವವಿದ್ಯಾಲಯ ಪರೀûಾ ವೇಳಾಪಟ್ಟಿ ಬಿಡುಗಡೆ ಮಾಡಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿ ಲಾಕ್‌ಡೌನ್ ಆಗಿದ್ದ ಸಮಯದಲ್ಲಿ ಹಿಂದಿನ ಸೆಮಿಸ್ಟರ್‌ನ ಪರೀಕ್ಷೆ ನಡೆಸಲಾಗಲಿಲ್ಲ. ನಂತರ ಎಲ್ಲ ವಿದ್ಯಾರ್ಥಿಗಳಿಗೆ ಮುಂದಿನ ಸೆಮಿಸ್ಟರ್ ಪಾಠಗಳನ್ನು ಆನ್ ಲೈನ್‌ನಲ್ಲಿ ಆರಂಭಿಸಿದ್ದು, ಹಠಾತ್ತನೆ ಹಿಂದಿನ ಸೆಮಿಸ್ಟರಿನ ಪರೀಕ್ಷೆ ಜುಲೈ ಕೊನೆ ವಾರದಿಂದ ಆಗಸ್ಟ್ ಮೊದಲ ವಾರದ ಅವ ಧಿಯಲ್ಲಿ ಪರೀಕ್ಷೆ ಮುಗಿಸಬೇಕು. ಸೆಪ್ಟೆಂಬರ್ ಅಂತ್ಯದೊಳಗೆ ಪ್ರಸ್ತುತ ಸೆಮಿಸ್ಟರ್ ಪರೀಕ್ಷೆ ಮುಗಿಸಬೇಕು ಎಂಬ ನಿರ್ಧಾರ ವಿದ್ಯಾರ್ಥಿನಿಯರ ಮೇಲೆ ಅತೀವ ಒತ್ತಡ ಹೇರಿದಂತಾಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಒಂದು ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ ನಡೆಸುವ ಬಗ್ಗೆ ಎಐಡಿಎಸ್‌ಒ ನಡೆಸಿದ ಗೂಗಲ್ ಸಮೀಕ್ಷೆಯಲ್ಲಿ ರಾಜ್ಯದ 45 ಸಾವಿರಕ್ಕೂ ಅಧಿ ಕ ವಿದ್ಯಾರ್ಥಿಗಳು ಪಾಲ್ಗೊಂಡು ಶೇ. 90.7 ವಿದ್ಯಾರ್ಥಿಗಳು ಹಿಂದಿನ ಸೆಮಿಸ್ಟರ್ ಪರೀಕ್ಷೆ ಕೈ ಬಿಡಲು ಆಗ್ರಹಿಸಿದ್ದಾರೆ. ಸರ್ಕಾರ ಪದವಿ, ಎಂಜಿನಿಯರಿಂಗ್, ಡಿಪ್ಲೋಮಾ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕೈಗೊಳ್ಳುವ ಮುನ್ನವೇ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿರುವುದು ಖಂಡನೀಯ. ಕೂಡಲೇ ಮಹಿಳಾ ವಿಶ್ವವಿದ್ಯಾಲಯ ಪರೀಕ್ಷಾ ದಿನಾಂಕ ಹಿಂಪಡೆಯಬೇಕು. ಎಲ್ಲ ವಿದ್ಯಾರ್ಥಿನಿಯರಿಗೆ ಲಸಿಕೆ ಹಾಕಿಸಿದ ಬಳಿಕವೇ ಪರೀಕ್ಷೆ ಕುರಿತು ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿದರು. ಅರ್ಚನಾ, ಅಕ್ಷತಾ ಜೆ, ಪ್ರಿಯಾಂಕಾ ಬುಶೆಟ್ಟಿ, ಪ್ರೀತಿ ಬಡಿಗೇರ, ಕಾವೇರಿ, ಸುರೇಖಾ ಕಡಪಟ್ಟಿ ಇದ್ದರು.