Advertisement

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

11:46 PM May 06, 2024 | Team Udayavani |

ಬೆಂಗಳೂರು: ಈ ಚುನಾವಣೆಯು ರಾಜಕೀಯ ಪಕ್ಷಗಳ ಸೋಲು-ಗೆಲುವನ್ನು ಮಾತ್ರ ನಿರ್ಧರಿಸುತ್ತಿಲ್ಲ. ಮಹಿಳೆಯರ ಪರವಾದ ಸರಕಾರದ ಕಾರ್ಯಕ್ರಮ ಸೋಲು-ಗೆಲುವನ್ನು ಕೂಡ ನಿರ್ಧರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಿಳಾ ಮತದಾರರಿಗೆ ಕರೆ ನೀಡಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ ಎಂದು ಸಾರಿದ ಮನುಶಾಸ್ತ್ರವನ್ನು ನಂಬಿದ ಬಿಜೆಪಿ ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಸ್ಥಾನಮಾನ ನೀಡಬೇಕೆಂದು ಸಾರಿದ ಸಂವಿಧಾನಕ್ಕೆ ಬದ್ಧವಾಗಿರುವ ಕಾಂಗ್ರೆಸ್‌ ಪಕ್ಷಗಳ ನಡುವೆ ಇಂದಿನ ಮಹಿಳೆಯರು ಆಯ್ಕೆ ಮಾಡಬೇಕಾಗಿದೆ ಎಂದಿದ್ದಾರೆ.

ಬಿಜೆಪಿಯು ಕಾಯಾ ವಾಚಾ ಮನಸಾ ಮಹಿಳಾ ವಿರೋಧಿ ಪಕ್ಷ. ಕರ್ನಾಟಕದಲ್ಲಿ ಸ್ತ್ರೀಪೀಡಕರ ಜತೆಗೆ ಬಿಜೆಪಿ ಕೈಜೋಡಿಸಿರುವುದೇ ಇತ್ತೀಚಿನ ಉದಾಹರಣೆ. ನಮ್ಮ ಸರಕಾರ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳನ್ನು ಆರಂಭಿಸಿದ ದಿನದಿಂದಲೂ ಬಿಜೆಪಿ ನಾಯಕರು ಅಪಪ್ರಚಾರದ ಆಂದೋಲನವನ್ನು ಆರಂಭಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸರಕಾರದ ಖಜಾನೆ ಖಾಲಿಯಾಗುತ್ತಿದೆ ಎಂದು ಕೆಲವರು ಆರೋಪಿಸಿದರೆ, ಇನ್ನು ಕೆಲವರು ಇನ್ನೂ ಮುಂದಕ್ಕೆ ಹೋಗಿ ಈ ರೀತಿಯ ನೆರವು ನೀಡಿದರೆ ಹೆಣ್ಣುಮಕ್ಕಳು ಮನೆಬಿಟ್ಟು ಹಾದಿ ತಪ್ಪುತ್ತಾರೆ ಎಂದು ತೀರಾ ಕ್ಷುಲ್ಲಕತನದ ಆರೋಪ ಮಾಡಿದ್ದಾರೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next