Advertisement

ಜೀವ ಬಿಟ್ಟೇನು, ದೇಶ ವಿಭಜನೆಗೆ ಅವಕಾಶ ಕೊಡೆನು..: ಬಿಜೆಪಿ ವಿರುದ್ಧ ಮಮತಾ ಗುಡುಗು

02:25 PM Apr 22, 2023 | Team Udayavani |

ಕೋಲ್ಕತ್ತಾ: ದ್ವೇಷದ ರಾಜಕಾರಣ ಮಾಡುವ ಮೂಲಕ ಕೆಲವರು ರಾಷ್ಟ್ರವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾನು ಪ್ರಾಣ ಕೊಡಲು ಸಿದ್ಧನಿದ್ದೇನೆ ಆದರೆ ದೇಶ ವಿಭಜನೆಗೆ ಅವಕಾಶ ನೀಡುವುದಿಲ್ಲ” ಎಂದು ಗುಡುಗಿದ್ದಾರೆ.

Advertisement

ನಗರದ ರೆಡ್ ರೋಡ್‌ ನಲ್ಲಿ ನಡೆದ ಈದ್ ನಮಾಜ್ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, 2024 ರ ಲೋಕಸಭಾ ಚುನಾವಣೆಯಲ್ಲಿ ಬಲಪಂಥೀಯ ಬಿಜೆಪಿ ಪಕ್ಷವನ್ನು ಸೋಲಿಸಲು ಜನರು ಒಂದಾಗಬೇಕು ಎಂದು ಒತ್ತಾಯಿಸಿದರು.

‘ಕೆಲವರು ದೇಶವನ್ನು ವಿಭಜಿಸಲು ಮತ್ತು ದ್ವೇಷದ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾನು ಪ್ರಾಣ ಕೊಡಲು ಸಿದ್ಧನಿದ್ದೇನೆ ಆದರೆ ದೇಶ ವಿಭಜನೆಗೆ ಅವಕಾಶ ನೀಡುವುದಿಲ್ಲ’ ಎಂದು ಅವರು ಹೇಳಿದರು.

ಇದನ್ನೂ ಓದಿ:ಹುಣಸೂರು: ಸುಡಾನ್‌ನಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಕ್ರಮ

ಕೇಸರಿ ಪಾಳಯವು ದೇಶದ ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಮಮತಾ, “ಪಶ್ಚಿಮ ಬಂಗಾಳದಲ್ಲಿ ಎನ್‌ ಆರ್‌ಸಿ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

Advertisement

ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ನೆರೆಯ ರಾಷ್ಟ್ರಗಳ ಅಲ್ಪಸಂಖ್ಯಾತರಿಗೆ ಪೌರತ್ವ ಹಕ್ಕುಗಳನ್ನು ನೀಡುವ ನಾಗರಿಕರ ತಿದ್ದುಪಡಿ ಕಾಯಿದೆಯ ಅಗತ್ಯವಿದೆ ಮತ್ತು ಅಸ್ತಿತ್ವದಲ್ಲಿರುವ ಪೌರತ್ವ ದಾಖಲೆಗಳು ಮತ್ತು ಕಾಯಿದೆಗಳು ಸಾಕಾಗುತ್ತದೆ ಎಂಬುದು ಟಿಎಂಸಿ ನಿಲುವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next