ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ ಮುಖ್ ವಿರುದ್ಧದ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಬೇಕೆಂಬ ಮಹಾರಾಷ್ಟ್ರ ಸರ್ಕಾರದ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂಕೋರ್ಟ್, ದೇಶ್ ಮುಖ್ ವಿರುದ್ಧದ ಸಿಬಿಐ ತನಿಖೆ ಮುಂದುವರಿಯಲಿದೆ ಎಂದು ತಿಳಿಸಿದೆ.
ಇದನ್ನೂ ಓದಿ:ತನ್ನ ದಾಖಲೆ ಮುರಿದ ಡ್ವೇನ್ ಬ್ರಾವೋಗೆ ಶುಭ ಕೋರಿದ ಲಸಿತ್ ಮಾಲಿಂಗ
ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ದೇಶ್ ಮುಖ್ ವಿರುದ್ಧದ ಪ್ರಕರಣದ ತನಿಖೆಯನ್ನು ನಡೆಸಬೇಕೆಂಬ ಮನವಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್, ನಾವು ಈ ಪ್ರಕರಣವನ್ನು ಮುಟ್ಟಲು ಬಯಸುವುದಿಲ್ಲ ಎಂದು ಹೇಳಿದೆ.
ಸುಪ್ರೀಂಕೋರ್ಟ್ ನ ಈ ನಿರ್ಧಾರದಿಂದ ಮಹಾರಾಷ್ಟ್ರ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರ ಸಿಬಿಐನಂತಹ ಸಂಸ್ಥೆಗಳನ್ನು ಸಚಿವರುಗಳು ಮತ್ತು ಪಕ್ಷದ ಮುಖಂಡರನ್ನು ಗುರಿಯಾಗಿರಿಸಿ ದಾಳಿ ನಡೆಸುತ್ತಿರುವುದಾಗಿ ಮಹಾರಾಷ್ಟ್ರ ಸರ್ಕಾರ ಆರೋಪಿಸಿತ್ತು.
ಅನಿಲ್ ದೇಶ್ ಮುಖ್ ವಿರುದ್ಧ ಸಿಬಿಐ ಭ್ರಷ್ಟಾಚಾರ ವಿರೋಧಿ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡ(ಎಸ್ ಐಟಿ)ಕ್ಕೆ ಹಸ್ತಾಂತರಿಸಬೇಕೆಂದು ಮಹಾರಾಷ್ಟ್ರ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಎನ್ ಸಿಪಿ ಮುಖಂಡ ಅನಿಲ್ ದೇಶ್ ಮುಖ್ ಮಹಾರಾಷ್ಟ್ರ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ವೇಳೆ ಪೊಲೀಸ್ ವರ್ಗಾವಣೆ ಮತ್ತು ಪೋಸ್ಟಿಂಗ್ ಗೆ ಲಂಚ ಪಡೆದಿರುವುದಾಗಿ ಮಹಾರಾಷ್ಟ್ರದ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಆರೋಪಿಸಿದ್ದರು.