ನವದೆಹಲಿ: ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಇಂದು ಗೌರವಾರ್ಪಣೆ ಮಾಡಲಿದ್ದಾರೆ.
ಪುಲ್ವಾಮಾ ದಾಳಿಯ ಹುತಾತ್ಮರಿಗೆ ನಾನು ಗೌರವ ಸಲ್ಲಿಸುತ್ತೇನೆ. ನಮ್ಮ ತಾಯಿನಾಡಿನ ಸಾರ್ವಭೌಮತ್ವ ಮತ್ತು ಸಮಗ್ರತೆಗಾಗಿ ಸರ್ವೋಚ್ಚ ತ್ಯಾಗ ಮಾಡಿದ ಧೈರ್ಯಶಾಲಿಗಳು ಮತ್ತು ಅವರ ಕುಟುಂಬಗಳಿಗೆ ಭಾರತ ಎಂದೆಂದಿಗೂ ಕೃತಜ್ಞರಾಗಿರಬೇಕು ” ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
2019ರಲ್ಲಿ ಈ ದಿನದಂದು ಪುಲ್ವಾಮಾದಲ್ಲಿ ನಡೆದ ಭೀಕರ ದಾಳಿಯ ಸಮಯದಲ್ಲಿ ಹುತಾತ್ಮರಾದ ಸಿಆರ್ ಪಿಎಫ್ ಯೋಧರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ. ಭಾರತ ಅವರ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ. ಇಡೀ ರಾಷ್ಟ್ರ ಭಯೋತ್ಪಾದನೆ ವಿರುದ್ಧ ಒಗ್ಗೂಡಿ ನಿಂತಿದೆ. ನಮ್ಮ ಹೋರಾಟವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದು ರಾಜನಾಥ್ ಸಿಂಗ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ 40 ಯೋಧರ ಸ್ಮರಣಾರ್ಥವಾಗಿ ಜಮ್ಮು ಕಾಶ್ಮೀರದಲ್ಲಿ ಇಂದು ಸ್ಮಾರಕ ಸ್ತಂಭ ಉದ್ಘಾಟನೆಯಾಗಲಿದೆ.