Advertisement
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಕೇಂದ್ರ ಸರ್ಕಾರದ ಯೋಜನೆಯಡಿ ಮಹಿಳಾ ಶಕ್ತಿ ಕೇಂದ್ರದ 2020-21 ನೇ ಸಾಲಿನ ಜಿಲ್ಲಾಮಟ್ಟದ ವಿಶೇಷ ಕಾರ್ಯಪಡೆ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಮುಂದಿನ 3 ತಿಂಗಳ ಅವ ಧಿಗೆ ರೂಪಿಸಿರುವ ಕ್ರಿಯಾಯೋಜನೆಗೆ ಅನುಮೋದನೆ ಪಡೆಯುವ ಜೊತೆಗೆ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
Related Articles
Advertisement
ಸಖೀ ಒನ್ ಸ್ಟಾಪ್ ಸೆಂಟರ್ ಯೋಜನೆ ಜಿಲ್ಲಾ ಸಮನ್ವಯ ಸಮಿತಿ ಹಾಗೂ ಪರಿಶೀಲನಾ ಸಭೆ ನಡೆಸಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಗೌರವಧನ ಆಧಾರದ ಮೇಲೆ ಈ ಕೇಂದ್ರಗಳ ಸಿಬ್ಬಂದಿ ಹೆಚ್ಚು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಈ ಕೇಂದ್ರಗಳಲ್ಲಿ 2020ರ ಏಪ್ರೀಲ್ ತಿಂಗಳಿಂದ ಜುಲೈವರೆಗಿನ ದಾಖಲಾದ ಪ್ರಕರಣಗಳು ಸೇರಿದಂತೆ ಈವರೆಗೆ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಪಟ್ಟ ಅತ್ಯಾಚಾರ, ಲೈಂಗಿಕ ಕಿರುಕುಳ ಸೇರಿದಂತೆ ಇನ್ನಿತರ ಸಮಗ್ರ ಮತ್ತು ಸಮರ್ಪಕ ವರದಿಯೊಂದಿಗೆ ಚರ್ಚಿಸಬೇಕು. ಅದರಂತೆ ಇಂತಹ ಪ್ರಕರಣಗಳಲ್ಲಿ ಶೀಘ್ರ ಪರಿಹಾರ ಒದಗಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಜಿಲ್ಲಾ ಸಮನ್ವಯ ಮತ್ತು ಪರಿಶೀಲನಾ ಸಭೆ ನಡೆಸಿದ ಅವರು, 2019-20 ಹಾಗೂ 2020-21ನೇ ಸಾಲಿನ ಪ್ರಕರಣ ದಾಖಲು ಇತ್ಯರ್ಥ ಸೇರಿದಂತೆ ಸೂಕ್ತ ಮಾಹಿತಿಗಳೊಂದಿಗೆ ವರದಿ ಸಿದ್ಧಪಡಿಸಿ ಮಂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾನೂನಿನ ಕುರಿತಂತೆ ಪ್ರತಿ ಗ್ರಾಮವಾರು ಗ್ರಾಮಸ್ಥರಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ತಿಳಿಹೇಳುವ ಜೊತೆಗೆ ಈವರೆಗೆ ಬಾಲ್ಯವಿವಾಹದಿಂದ ರಕ್ಷಿಸಿದ ಮಕ್ಕಳ ಬಗ್ಗೆಯೂ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಿದರು.
ಜಿಪಂ ಸಿಇಒ ಗೋವಿಂದರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆಲಗೂರ, ಸಿಡಿಪಿಒ ಚವ್ಹಾಣ ಸೇರಿದಂತೆ ಇತರೆ ಅಧಿಕಾರಿ, ಸಿಬ್ಬಂದಿ ಇದ್ದರು