Advertisement
ಕುಮಟಾದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳ ಸೌಲಭ್ಯ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. 1200 ಕೋಟಿ ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ 450 ಕೋಟಿ ವೆಚ್ಚದ ಕಾಮಗಾರಿಗಳ ಶಂಕು ಸ್ಥಾಪನೆ ನೆರೆವರಿಸಿ ಅವರು, ಕರ್ನಾಟಕದ 31 ಜಿಲ್ಲಾಗಳಲ್ಲಿ ಇಂದು ಫಲಾನುಭವಿಗಳ ಸಮಾವೇಶ ನಡೆಯುತ್ತಿದ್ದು, ರಾಜ್ಯದ ಎಲ್ಲಾ ಸಮಾವೇಶಗಳಿಗಿಂತಲೂ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಫಲಾನುಭವಿಗಳ ಸಮಾವೇಶ ಮಾಡುತ್ತಿದ್ದೇವೆ ಎಂದರು.
Related Articles
Advertisement
ಇಂಧನ ಸಚಿವ ಸುನಿಲ್ ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಇಂದು ಸಾವಿರಾರು ಫಲಾನುಭವಿಗಳಿಗೆ ನೀಡುವ ಸಲುವಾಗಿ ಎಲ್ಲರನ್ನು ಒಂದು ಕಡೆ ಸೇರಿಸಿದದ್ದೇವೆ ಎಂದರು. ಸರ್ಕಾರದಿಂದ ಜಾರಿಯಾದ ಯೋಜನೆಗಳಲ್ಲಿ ಪ್ರತಿಷತ್ 80 ರಷ್ಟು ಯೋಜನೆಗಳನ್ನು ಈಗಾಗಲೇ ಜನರಿಗೆ ತಲುಪಿಸಿದ್ದೇವೆ ಎಂದರು. ಸರ್ಕಾರವು ಮಹಿಳೆಯರ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ನೀಡಿದೆ ಅದರಲ್ಲಿ ಮಡಿಲು ಯೋಜನೆ , ಸಂದ್ಯಾ ಸುರಕ್ಷಾ ಯೋಜನೆ,ಉಜ್ವಲ ಯೋಜನೆ, ಹೆಣ್ಣು ಮಕ್ಕಳಿಗೆ ಸೈಕಲ್ ವಿತರಣೆ ಮುಂತಾದ ಯೋಜನೆಗಳ ಮೂಲಕ ಅವರು ಬೆಳವಣಿಗೆಗೆ ಶ್ರಮಿಸುತ್ತಿದೆ ಎಂದರು. ಸರ್ಕಾರ ಮಾಡಿರು ಕೆಲಸವನ್ನು ಜನರಿಗೆ ತೋರಿಸಲು ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ ಎಂದರು.
ವಿಧಾನ ಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ದೇಶಕ್ಕೆ ಸ್ವತಂತ್ರ ಬಂದಾಗ ಆಹಾರಕ್ಕಾಗಿ ಪರದಾಡುತ್ತಿದ್ದೆವು ಇಂದು ನಾವು ಸ್ವಾವಲಂಬನೆಯಾಗಿದ್ದೇವೆ. ಈ ಸಂದರ್ಭದಲ್ಲಿ ರೈತರನ್ನು ಸ್ಮರಿಸುವುದು ಅವಶ್ಯಕತೆ ಇದೆ ಎಂದರು. ಹಾಗೆಯೇ ದೇಶದಲ್ಲಿ ಅರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತಂದಿದ್ದೇವೆ ಜೊತೆಗೆ ಸೈನಿಕ್ ಕ್ಷೇತ್ರದಲ್ಲೂ ಸಾಕಷ್ಟು ಬದಲಾವಣೆ ತಂದಿದ್ದೇವೆ ಹೀಗಾಗಿ ಇಂದು ದೇಶದ ಸೇನಾ ಬಲವು ಸಾಕಷ್ಟು ಶಸಕ್ತವಾಗಿದೆ ಎಂದರು. ಜೊತೆ ಜೊತೆಗೆ ಶಿಕ್ಷಣ, ಕೈಗಾರಿಕ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವುದರ ಮೂಲಕ ಅಭಿವೃದ್ಧಿ ಪಥದತ್ತ ದೇಶ ಸಾಗುತ್ತಿದೆ ಎಂದರು ಇಂದು ಭಾರತ ಬಲಿಷ್ಠ ರಾಷ್ಟ್ರವಾಗಿ ಎದ್ದು ನಿಂತಿದೆ ಇದಕ್ಕೆ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳೇ ಮೂಲವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕಿ ರೂಪಾಲಿ ನಾಯ್ಕ, ಭಟ್ಕಳ್ ಶಾಸಕ ಸುನಿಲ್ ನಾಯ್ಕ, ಕುಮಟಾ ಶಾಸಕ ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಸಿದ್ದಿ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಈಶ್ವರ್ ಕಾಂದೂ, ಕುಮಟಾ ಉಪ ವಿಭಾಗಧಿಕಾರಿ ರಾಘವೇಂದ್ರ ಜಗಲಾಸರ್, ಕುಮಟಾ ಪುರಸಭೆ ಅಧ್ಯಕ್ಷೆ ಅನುರಾಧ ಬಾಳೆರಿ, ಹಾಗೂ ಜಿಲ್ಲಾ ಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.