Advertisement
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತಗಟ್ಟೆ ಮೈಕ್ರೋ ವೀಕ್ಷಕರ ಮೊದಲ ಹಂತದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 37 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಮತಗಟ್ಟೆಗೆ ಓರ್ವರಂತೆ ಕೇಂದ್ರ ಸರ್ಕಾರದಅಧಿಕಾರಿಗಳನ್ನು ಮೈಕ್ರೋ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ನೇಮಕಗೊಂಡ ಅಧಿಕಾರಿಗಳು ಮತಗಟ್ಟೆಯ ಚಲನವಲನ, ವೆಬ್ ಕಾಸ್ಟಿಂಗ್ ವ್ಯವಸ್ಥೆ, ಮತದಾನ ಪ್ರಕ್ರಿಯೆ ಕುರಿತಂತೆ ನಿಗಾ ವಹಿಸಿ ವರದಿ ಮಾಡುವಂತೆ ಸೂಚನೆ ನೀಡಿದರು.
Related Articles
Advertisement
ತಹಶೀಲ್ದಾರ್ ಜಿ.ಎಸ್. ಶಂಕರ ಮಾತನಾಡಿ, ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕಮತಗಟ್ಟೆ ಅಧಿಕಾರಿಗಳು ಆಯೋಗದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಬೇಕು. ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿಕೋವಿಡ್ ಸುರಕ್ಷಿತಾ ಕ್ರಮಗಳ ಕುರಿತಂತೆ ಮತಗಟ್ಟೆ ಕೇಂದ್ರಗಳಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಅಚ್ಚುಕಟ್ಟಾಗಿ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಲು ಚುನಾವಣಾ ಆಯೋಗದ ನಿರ್ದೇಶನದಂತೆ ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತಗಟ್ಟೆ ನಿಯಮಾವಳಿಗಳ ಕುರಿತಂತೆ ತರಬೇತಿಯಲ್ಲಿ ಮನನ ಮಾಡಿಕೊಂಡು ವ್ಯವಸ್ಥಿತ ಹಾಗೂ ಪಾರದರ್ಶಕ ಮತದಾನದ ವ್ಯವಸ್ಥೆಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ, ಶಿಕ್ಷಣಾಧಿಕಾರಿ ಭಗವಂತಗೌಡರ ಅವರು ಸಂಪನ್ಮೂಲ ಅಧಿಕಾರಿಗಳು ನಿಯೋಜಿತ ಮತಗಟ್ಟೆ ಅಧಿಕಾರಿಗಳಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತಂತೆ ತರಬೇತಿ ನೀಡಿದರು.