Advertisement
ಗುರುವಾರ ವಿಧಾನಸೌಧದಲ್ಲಿ ವಿಧಾನಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಕುಳಿತು ಚರ್ಚಿಸಿ ಬಾದರ್ಲಿ ಅವರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಿ ಕಳುಹಿಸಿದ್ದೇವೆ. ಅವರು ಒಳ್ಳೆಯ ಕೆಲಸಗಳನ್ನು ಮಾಡಲಿ ಎಂಬುದಾಗಿ ಶುಭ ಹಾರೈಸುತ್ತೇನೆ ಎಂದರು.
ಮೇಲೆ ಕೇಸ್: ಶಿವಕುಮಾರ್ ಎಚ್ಚರಿಕೆ
ಬೆಂಗಳೂರು: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವಿರೋಧ ಆಯ್ಕೆಯಾದ ಕಾಂಗ್ರೆಸ್‌ನ ಬಸನಗೌಡ ಬಾದರ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ವಿಧಾನಸೌಧ, ಚಾಲುಕ್ಯ ವೃತ್ತದ ಸುತ್ತಮುತ್ತ ಬ್ಯಾನರ್, ಫ್ಲೆಕ್ಸ್‌ಗಳನ್ನು ಹಾಕಿದ್ದಕ್ಕೆ ಡಿಸಿಎಂ ಶಿವಕುಮಾರ್ ಗರಂ ಆಗಿದ್ದಲ್ಲದೆ, ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೆ ಕೇಸ್ ಹಾಗೂ ಫೈನ್ ಹಾಕಲು ಸೂಚನೆ ನೀಡಿದ್ದಾಗಿಯೂ ಹೇಳಿದರು.