Advertisement

ಕೋವಿಡ್ ಮುಕ್ತಗೊಳಿಸಲು ಶ್ರಮಿಸಿ

12:53 PM Sep 30, 2020 | Suhan S |

ದೇವನಹಳ್ಳಿ: ಜಿಲ್ಲೆಯಲ್ಲಿ ಕೋವಿಡ್‌ 19 ವೈರಾಣು ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ಅಧಿಕಾರಿಗಳಿಗೆ ಸೂಚಿಸಿದರು.

Advertisement

ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತೆಗೆದುಕೊಂಡ ಕ್ರಮ ಹಾಗೂ ಇತರೆ ವಿಷಯಗಳ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸೋಂಕಿತರ ಪ್ರಥಮ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕ ದತ್ತಾಂಶ ಸಂಗ್ರಹಿಸಿದ ಮಾಹಿತಿಯನ್ನು ಪ್ರತಿದಿನ ಸಂಬಂಧಿಸಿದ ಆ್ಯಪ್‌ಗಳಿಗೆ ಅಪ್ಲೋಡ್‌ ಮಾಡಬೇಕು. ಕ್ವಾರಂ ಟೈನ್‌, ವಾಚ್‌ಗಾರ್ಡ್‌ ಹಾಗೂ ಹೋಮ್‌ ಐಸೋಲೆಷನ್‌ಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ದಿನನಿತ್ಯ ಪರಿಶೀಲನೆ ಮಾಡಲು ನೋಡಲ್‌ ಅಧಿಕಾರಿಯನ್ನು ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಆರೋಗ್ಯಾಧಿಕಾರಿಗಳೊಡನೆ ಚರ್ಚಿಸಿ, ಸೋಂಕಿತರ ಪ್ರಮಾಣ, ಗುಣಮುಖರ ಪ್ರಮಾಣ ಹಾಗೂ ಸೋಂಕಿನಿಂದ ಮರಣ ಹೊಂದಿದವರ ಮಾಹಿತಿಯನ್ನು ಪಡೆದು, ನಿಖರ ಮಾಹಿತಿಯೊಂದಿಗೆ ಹೆಚ್ಚು ಕಾರ್ಯ ಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು. ಜಿಲ್ಲೆಯಲ್ಲಿ 9,088 ಕೊರೊನಾ ಸೋಂಕಿತ ರಿದ್ದು, 7,621 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1,392 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.91ಮಂದಿಸೋಂಕಿನಿಂದಮೃತಪಟ್ಟಿದ್ದಾರೆ ಎಂದುಡೀಸಿ ಸಭೆಗೆಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎನ್‌. ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್‌ ಕೆ.ನಾಯಕ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಧರ್ಮೆàಂದ್ರ, ಉಪ ವಿಭಾಗಾಧಿಕಾರಿಅರುಳ್‌ಕುಮಾರ್‌ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕುಗಳ ತಹಶೀಲ್ದಾರ್‌ಗಳು ಹಾಗೂ ಆರೋಗ್ಯಾಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next