Advertisement

ಮಾದಕ ವಸ್ತು ಮುಕ್ತ ಜಿಲ್ಲೆಗೆ ಸಂಕಲ್ಪ: ಮಿಥುನ್‌ ಕುಮಾರ್‌

04:10 PM Nov 03, 2020 | Suhan S |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಾದಕ ವಸ್ತು ಮತ್ತು ಮಾದಕ ದ್ರವ್ಯಗಳ ಸೇವನೆಯಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸಂಘಸಂಸ್ಥೆಗಳ ಸಹಕಾರ ಅಗತ್ಯವಾಗಿದೆ ಎಂದುಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಹೇಳಿದರು.

Advertisement

ಎಸ್ಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಾದಕ ವಸ್ತು ಮತ್ತು ಮಾದಕ ದ್ರವ್ಯ ವಿರೋಧಿ ಸಪ್ತಾ ಸಮಾರೋಪದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕಾಲೇಜುಗಳು ಮತ್ತು ಜನಸಂದಣಿ ಪ್ರದೇಶಗಳಲ್ಲಿ ಮಾದಕ ವಸ್ತು ಮತ್ತು ಮಾದಕ ದ್ರವ್ಯಗಳ ಸೇವನೆಯಿಂದ ಆಗುತ್ತಿರುವ ದುಷ್ಪರಿಣಾಮ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ. ಜಿಲ್ಲೆಯನ್ನು ಮಾದಕ ವಸ್ತುಗಳಿಂದಮುಕ್ತ ಮಾಡಲು ಸಂಘ ಸಂಸ್ಥೆಗಳು ಸಹಕಾರ ಪ್ರಮುಖ ಎಂದರು.

ಜಿಲ್ಲೆಯಲ್ಲಿ ಜನಸಾಮಾನ್ಯರ ಆಸ್ತಿ ಪಾಸ್ತಿ ಗಳನ್ನು ಸಂರಕ್ಷಣೆ ಮಾಡುವ ಜೊತೆಗೆ ಕಾನೂನುಸುವ್ಯವಸ್ಥೆ ಕಾಪಾಡಲು ಆದ್ಯತೆ ನೀಡಲಾಗಿದೆ.ಪೊಲೀಸ್‌ ಇಲಾಖೆಯನ್ನು ಜನಸ್ನೇಹಿ ಮಾಡುವ ನಿಟ್ಟಿನಲ್ಲಿ ಅನೇಕ ಕಾರ್ಯ ಕ್ರಮಗಳನ್ನು ನಡೆಸಲಾಗಿದ್ದು, ನಾಗರಿಕರು ಸಹ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಪ್ತಾಹವನ್ನು ಯಶಸ್ವಿ ಗೊಳಿಸಲು ಸಹಕರಿಸಿದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದರು. ಸಭೆಯಲ್ಲಿಚಿಕ್ಕಬಳ್ಳಾಪುರ ಡಿವೈಎಸ್ಪಿ ರವಿಶಂಕರ್‌, ಚಿಂತಾಮಣಿ ಡಿವೈಎಸ್ಪಿ ಲಕ್ಷ್ಮಯ್ಯ, ಜಿಲ್ಲೆಯವಿವಿಧ ಪೊಲೀಸ್‌ ಠಾಣೆಗಳ ಆರಕ್ಷಕವೃತ್ತ ನಿರೀಕ್ಷಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಗರ ಸ್ಮಾರ್ಟ್‌ ಸಿಟಿ ಮಾಡಲು ಸಹಕರಿಸಿ :

ಚಿಕ್ಕಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸುವ ಮೂಲಕ ನಗರವನ್ನು ಸ್ಮಾರ್ಟ್‌ಸಿಟಿ ಮಾಡಲು ಸಹಕರಿಸಬೇಕೆಂದು ನಗರಸಭೆ ನೂತನ ಅಧ್ಯಕ್ಷ ಡಿ.ಎಸ್‌.ಆನಂದ್‌ರೆಡ್ಡಿ ತಿಳಿಸಿದರು.

Advertisement

ನಗರಸಭೆ ಸಭಾಂಗಣದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಭೆ ನಡೆಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಿ ನಾಗರಿಕರಿಂದ ದೂರುಗಳು ಬರದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.

ರಾಜ್ಯದಲ್ಲಿ ಸ್ವತ್ಛ ಸರ್ವೇಕ್ಷಣ್‌ ಅಭಿಯಾನದಲ್ಲಿ ಚಿಕ್ಕಬಳ್ಳಾಪುರ ನಗರವು 9 ನೇ ಸ್ಥಾನದಲ್ಲಿದ್ದು, ನಗರಸಭೆ ವ್ಯಾಪ್ತಿಯಲ್ಲಿ ಕಸ ಕಡ್ಡಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ನಗರವನ್ನು ಸ್ವತ್ಛವಾಗಿಟ್ಟುಕೊಂಡು ಮುಂದಿನ ದಿನಗಳಲ್ಲಿ ಸ್ವತ್ಛ ಸರ್ವೇಕ್ಷಣ್‌ ದಲ್ಲಿ ಪ್ರಥಮ ಸ್ಥಾನಕ್ಕೆ ತರಲು ಅಧಿಕಾರಿಗಳು ಶ್ರಮಿಸಬೇಕೆಂದರು.

Advertisement

Udayavani is now on Telegram. Click here to join our channel and stay updated with the latest news.

Next