Advertisement

ಪ್ರಧಾನಿ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿ

11:40 AM Feb 10, 2023 | Pranav MS |

ಶಿವಮೊಗ್ಗ: ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ. 27ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆ ಕುರಿತು ಗುರುವಾರ ಅಧಿಕಾರಿಗಳ ಪೂರ್ವ ಸಿದ್ಧತಾ ಸಭೆ ನಡೆಯಿತು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಮಾತನಾಡಿ, ಫೆ. 27 ರಂದು ಪ್ರಧಾನಿ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಪ್ರಧಾನಿ ಅವರು ಜಿಲ್ಲೆಯ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಸಿರಿಧಾನ್ಯ ಮೇಳದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಅವರ ಭೇಟಿ ಸಂದರ್ಭದಲ್ಲಿ ಸೂಕ್ತ ಟ್ರಾಫಿಕ್‌ ವ್ಯವಸ್ಥೆ, ಬೆಂಗಾವಲು ವಾಹನಗಳು, ಸುರಕ್ಷತಾ ಕ್ರಮಗಳು, ವೇದಿಕೆ, ಗ್ರೀನ್‌ ರೂಂ, ಅತಿಥಿ ಗಣ್ಯರಿಗೆ ವಾಸ್ತವ್ಯ ಮತ್ತು ಆತಿಥ್ಯ ವ್ಯವಸ್ಥೆ, ಇಂಟರ್‌ನೆಟ್‌ ಸಂಪರ್ಕ, ಸಿಸಿಟಿವಿ ಅಳವಡಿಕೆ, ನಿರಂತರ ವಿದ್ಯುತ್‌ ಸಂಪರ್ಕ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.

ಪ್ರತಿಯೊಂದು ಕಾರ್ಯದ ಮೇಲುಸ್ತುವಾರಿಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್‌ ಅ ಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದರು. ಸ್ಥಳೀಯವಾಗಿ ಅಂಬ್ಯುಲೆನ್ಸ್‌, ಅಗ್ನಿಶಾಮಕ ದಳ ವಾಹನ ವ್ಯವಸ್ಥೆ ಮಾಡಬೇಕು. ಪೊಲೀಸ್‌ ಬ್ಯಾಂಡ್‌ ವತಿಯಿಂದ ರಾಷ್ಟ್ರಗೀತೆ ನುಡಿಸಲಾಗುವುದು. ಆಹಾರದ ಸುರಕ್ಷತೆ, ಬೆಂಕಿ ಸುರಕ್ಷತೆ ಮತ್ತು ವಿದ್ಯುತ್‌ ಸುರಕ್ಷತೆಯನ್ನು ಸಂಬಂಧಪಟ್ಟ ಇಲಾಖಾಧಿಕಾರಿಗಳು ಪ್ರಮಾಣೀಕರಿಸಬೇಕು.

ಅತಿಥಿಗಳ ಸೂಕ್ತ ವಾಸ್ತವ್ಯಕ್ಕಾಗಿ ಎಲ್ಲಾ ಸರ್ಕಾರಿ ಅತಿಥಿ ಗೃಹಗಳು ಮತ್ತು ನಗರದ ಲಾಡ್ಜ್ಗಳನ್ನು ಕಾಯ್ದಿರಿಸಬೇಕು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ, ವೇದಿಕೆ ಹಾಗೂ ಮುಂಭಾಗದಲ್ಲಿ ಆಸನ ವ್ಯವಸ್ಥೆ, ಪ್ರವೇಶ ದ್ವಾರ, ಶೌಚಾಲಯ ಸೇರಿದಂತೆ ಪ್ರತಿಯೊಂದು ಅಂಶಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಅಧಿಕಾರಿಗಳು ತಮಗೆ ನೀಡಲಾಗುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದರು.

Advertisement

ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಎನ್‌.ಡಿ. ಪ್ರಕಾಶ್‌, ಮುಖ್ಯಮಂತ್ರಿ ಅವರ ವಿಶೇಷಾಧಿಕಾರಿ ರಾಜಪ್ಪ, ಎಎಸ್ಪಿ ಅನಿಲ್‌ ಕುಮಾರ್‌ ಭೂಮರಡ್ಡಿ, ಪಿಡಬ್ಲೂಡಿ ಚೀಫ್‌ ಇಂಜಿನಿಯರ್‌ ಕಾಂತರಾಜು, ಅಪರ ಜಿಲ್ಲಾಧಿಕಾರಿ ಎಸ್‌.ಎಸ್‌.ಬಿರಾದಾರ್‌, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next