ದೇವನಹಳ್ಳಿ : ಗ್ರಾಮಗಳು ಅಭಿವೃದ್ಧಿಯಾದಾಗ ಮಾತ್ರ ಜಿಲ್ಲೆ ಅಭಿವೃದ್ಧಿಯಾಗಲು ಸಾಧ್ಯ ವಾಗುವುದರಿಂದ ಜಿಲ್ಲೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಗ್ರಾಮಗಳ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸ ಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಎಂ. ನಾಗರಾಜು ತಿಳಿಸಿದರು.
ಪ್ರಗತಿ ಪರಿಶೀಲನಾ ಸಭೆ : ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶೇಷ ಕಾರ್ಯಕ್ರಮ: ಆರ್ಥಿಕ, ಭೌತಿಕ ಗುರಿಗಳಿಗನುಗುಣವಾಗಿ ಪ್ರಗತಿ ಸಾಧಿಸುವುದರೊಂದಿಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು, ಸ್ಥಳೀಯರ ಸಹಕಾರದೊಂದಿಗೆ ಗ್ರಾಮಗಳ ಅಭಿ ವೃದ್ಧಿಗೆ ವಿಶೇಷವಾದ ಕಾರ್ಯಕ್ರ ಮಗಳನ್ನು ಹಮ್ಮಿಕೊಳ್ಳಬೇಕೆಂದು ಹೇಳಿದರಲ್ಲದೇ, ಗ್ರಾಮ ಪರಿಸರದ ಕಾಳಜಿಯಿಂದ ಗ್ರಾಮದಲ್ಲಿ ನೈರ್ಮಲ್ಯತೆ ಕಾಪಾಡಬೇಕೆಂದು ಎಂದು ಹೇಳಿದರು.
ಬಿರುದು ಗೌರವ: ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದವರಿಗೆ ಸ್ಟಾರ್ ಆಫ್ ದಿ ವೀಕ್ ಎಂಬ ಬಿರುದನ್ನು ನೀಡಿ ಗೌರವಿಸಲಾಗುವುದೆಂದು ಘೋಷಿಸಿದರು. 2020ರ ಜನವರಿ ಮಾಹೆಯ ಮೊದಲ ವಾರದ “”ಸ್ಟಾರ್ ಆಫ್ ದಿ ವೀಕ್” ಆಗಿ ನೆಲಮಂಗಲ ತಾಲೂಕಿನ ಅರಿಷಿನಕುಂಟೆ ಗ್ರಾಮ ಪಂಚಾಯಿತಿ ಪಿಡಿಒ ಗಂಗರಾಜು ಅವರು ಆಯ್ಕೆಯಾಗಿದ್ದು, ಸಭೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಯೋಜನಾ ನಿರ್ದೇಶಕ ಶಿವರುದ್ರಪ್ಪ ಹಾಗೂ ತಾಲೂಕು ಕಾರ್ಯ ನಿರ್ವಹಣಾ ಧಿಕಾರಿಗಳು, ಜಿಲ್ಲೆಯ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.