Advertisement

ಗ್ರಾಪಂ ಚುನಾವಣೆ; ಗೆಲುವಿಗೆ ಶ್ರಮಿಸಿ

05:51 PM Nov 29, 2020 | Suhan S |

ಹರಿಹರ: ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜನರಿಗೆ ತಲುಪಿಸಬೇಕಿದೆ. ಈ ನಿಟ್ಟಿನಲ್ಲಿ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

Advertisement

ನಗರದ ಎಚ್‌.ಕೆ. ವೀರಪ್ಪ ಕಲ್ಯಾಣಮಂಟಪದಲ್ಲಿ ಶನಿವಾರ ನಡೆದ ಬಿಜೆಪಿ ನಗರ ಮಂಡಲದ ಪ್ರಶಿಕ್ಷಣ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ, ರಾಜ್ಯದ ಯೋಜನೆಗಳನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸುವಲ್ಲಿ ಸ್ಥಳೀಯ ಜನಪ್ರತಿನಿಧಿ ಗಳ ಪಾತ್ರ ಮಹತ್ವದ್ದು ಎಂದರು. ಎನ್‌ಡಿಎ ಸರ್ಕಾರ ರೈತ, ಕಾರ್ಮಿಕ, ಜನಸಾಮಾನ್ಯರ ಪರವಾದ ಯೋಜನೆಗಳನ್ನು ಜಾರಿಗೊಳಿಸಿದೆ. 2023 ರೊಳಗೆ ರೈತರ ಆದಾಯ ದ್ವಿಗುಣ ಮಾಡುವ ಸಂಕಲ್ಪವಿದೆ. ಜಿಲ್ಲೆಯಲ್ಲಿ ಉಜ್ವಲ ಯೋಜನೆಯಡಿ 1.20 ಲಕ್ಷ ಫಲಾನುಭವಿಗಳಿಗೆ ಅಡುಗೆ ಅನಿಲಗಳನ್ನು ಉಚಿತವಾಗಿ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಕೋವಿಡ್‌ನಿಂದ ಸಂಕಷ್ಟಕ್ಕೀಡಾದ ದೇಶವಾಸಿಗಳ

ಆರ್ಥಿಕ ಸಬಲೀಕರಣಕ್ಕಾಗಿ ಆತ್ಮ ನಿರ್ಭರ ಯೋಜನೆಯಡಿ ಕೇಂದ್ರ ಸರ್ಕಾರ 23 ಸಾವಿರ ಲಕ್ಷ ಕೋಟಿ ರೂ.ಗಳ ವಿಶೇಷ ಪ್ಯಾಕೇಜ್‌ ನೀಡಿದೆ.ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸುವಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡುವ ಮೂಲಕ ಗ್ರಾಪಂ ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶ್ರಮಿಸಬೇಕು ಎಂದು ಕರೆ ನೀಡಿದರು.

Advertisement

ಮಾಜಿ ಶಾಸಕ ಬಿ.ಪಿ. ಹರೀಶ್‌ ಮಾತನಾಡಿ, ಪಕ್ಷದಿಂದ 3 ವರ್ಷಕ್ಕೊಮ್ಮೆ ನಡೆಯುವ ಪ್ರಶಿಕ್ಷಣ ವರ್ಗದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸುತ್ತಾರೆ. ಪ್ರಶಿಕ್ಷಣ ಕಾರ್ಯಾಗಾರದಲ್ಲಿ ತರಬೇತಿ ಪಡೆದ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಕೆಲಸವನ್ನು ಮಾಡಬೇಕಿದೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್‌. ಜಗದೀಶ್‌, ದೂಡಾ ಸದಸ್ಯ ರಾಜು ರೋಖಡೆ, ನಗರಸಭಾ ಸದಸ್ಯರಾದ ರಜನಿಕಾಂತ್‌, ವಿಜಯಕುಮಾರ್‌, ನೀತಾ ಮೆಹರ್ವಾಡೆ, ಅಶ್ವಿ‌ನಿ ಕೆ., ಬಿಜೆಪಿ ನಗರಾಧ್ಯಕ್ಷ ಅಜಿತ್‌ ಸಾವಂತ್‌, ಪ್ರಧಾನ ಕಾರ್ಯದರ್ಶಿ ಮಂಜಾ ನಾಯ್ಕ, ಮಾರುತಿ ಶೆಟ್ಟಿ, ರೂಪಾ ಕಾಟ್ವೆ, ಸಂತೋಷ್‌, ಬಿ.ಚಂದ್ರಶೇಖರ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next