Advertisement
ಏಕೋಪಾಧ್ಯಾಯ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕಿಯರನ್ನು ಬಿಟ್ಟು ಸಂಚಾರ ವ್ಯವಸ್ಥೆ ಇಲ್ಲದ ಎಲ್ಲ ಶಿಕ್ಷಕಿಯರು ಜೂ. 21ರ ವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ದ್ವಿತೀಯ ಪಿಯುಸಿಯ ಪುನರಾವರ್ತಿತ ವಿದ್ಯಾರ್ಥಿಗಳನ್ನೂ ಪರೀಕ್ಷೆ ಇಲ್ಲದೆ ತೇರ್ಗಡೆ ಮಾಡುವ ಬಗ್ಗೆ ನಿಲುವು ತಿಳಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.
Related Articles
Advertisement
ಅರ್ಜಿದಾರರ ವಾದಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಉತ್ತೀರ್ಣಗೊಳಿಸಲು ಸರಕಾರ ತೀರ್ಮಾನಿಸಿದೆ. ಇದನ್ನು ಪುನರಾವರ್ತಿತ ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು. ಇಲ್ಲವಾದರೆ ತಾರತಮ್ಯ ಮಾಡಿದಂತಾಗುತ್ತದೆ ಎಂದು ಅರ್ಜಿದಾರರು ಕೋರಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಸೂಚಿಸಿದ ಪೀಠ, ಜೂ.17ಕ್ಕೆ ವಿಚಾರಣೆ ಮುಂದೂಡಿದೆ.
ಹೈಕೋರ್ಟ್ ಆದೇಶದ ಬಗ್ಗೆ ಪರಿಶೀಲನೆ ನಡೆಸಿ ಸರಕಾರದ ನಿಲುವನ್ನು ತಿಳಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.