Advertisement

ವರ್ಕ್‌ ಫ್ರಮ್ ಹೋಮ್‌ ಆದೇಶ ಕಟ್ಟುನಿಟ್ಟಾಗಿ ಪಾಲಿಸಿ: ಡಾ.ಅಶ್ವತ್ಥನಾರಾಯಣ

09:59 AM Mar 21, 2020 | Sriram |

ಬೆಂಗಳೂರು: ಅಗತ್ಯ ಸೇವೆಗಳನ್ನು ಹೊರತುಪಡಿಸಿ ಐಟಿ ಬಿಟಿ ಕಂಪೆನಿಗಳ ಎಲ್ಲ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು (ವರ್ಕ್‌ ಫ್ರಮ್ ಹೋಮ್‌) ಎಂದು ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ನಿರ್ದೇಶಿಸಿದ್ದಾರೆ.

Advertisement

ಐಟಿ  ಬಿಟಿ, ಸ್ಟಾರ್ಟ್‌ ಅಪ್‌ ಕಂಪೆನಿಗಳ ಮುಖ್ಯಸ್ಥರ ಜತೆ ಶುಕ್ರವಾರ ವಿಧಾನಸೌಧದಲ್ಲಿ ನಡೆದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ಕೋವಿಡ್‌ 19 ನಿಯಂತ್ರಣಕ್ಕಾಗಿ ಐಟಿ ಬಿಟಿ, ಸ್ಟಾರ್ಟ್‌ ಅಪ್‌ ಕಂಪೆನಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಈ ಮೊದಲೇ ಸಲಹೆ ನೀಡಲಾಗಿತ್ತು. ಆದರೆ ಕೆಲವಡೆ ಇದು ಜಾರಿ ಆಗಿಲ್ಲ ಎಂಬ ದೂರು ಕೇಳಿಬಂದಿತ್ತು. ಮುಂದಿನ ದಿನಗಳಲ್ಲಿ “ವರ್ಕ್‌ ಫ್ರಮ್ ಹೋಮ್‌” ವಿಧಾನವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಆದೇಶಿಸಲಾಗುವುದು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಜ್ಯದ ನಿರ್ದೇಶ ಹೊರಡಿಸಲಾಗುವುದು. ಇನ್ನು ಸರಕಾರ ಇದನ್ನು ಕಡ್ಡಾಯಗೊಳಿಸುವ ಮೊದಲೇ ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಿಂದ ಕಂಪೆನಿಗಳೆ ಅಗತ್ಯ ನಿರ್ಣಯ ಕೈಗೊಳ್ಳಬೇಕು ಎಂದು ತಿಳಿಸಿದರು.

ಮನೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಬ್ರಾಡ್‌ಬ್ಯಾಂಡ್‌, ಇಂಟರ್‌ನೆಟ್‌, ವಿದ್ಯುತ್‌ ಸಮಸ್ಯೆ ಎದುರಾಗುತ್ತದೆ. ಜತೆಗೆ ಬಹಳಷ್ಟು ಮಂದಿ ಯುವ ಉದ್ಯೋಗಿಗಳು ಊಟದ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ. ಪಿಜಿಗಳಲ್ಲಿ ಸಮಸ್ಯೆ ಆಗುತ್ತಿವೆ ಎಂಬ ವಿಷಯಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಬೆಸ್ಕಾಂ ಮತ್ತು ಟೆಲಿಕಾಂ ಸಂಸ್ಥೆಗಳ ಜತೆ ಮಾತುಕತೆ ನಡೆಸಲಾಗುವುದು. ಈ ಎಲ್ಲ ಸಮಸ್ಯೆಗಳ ಬಗ್ಗೆ ಗಮನ ಹರಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋವಿಡ್‌ 19 ನಿಯಂತ್ರಣ ಸಂಬಂಧ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ವಿವರಿಸಿದರು. ಜತೆಗೆ ಕಂಪೆನಿಗಳ ಮುಖ್ಯಸ್ಥರ ಸಮಸ್ಯೆ ಆಲಿಸಿ, ಸಲಹೆ  ಸೂಚನೆಗಳನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಕಾನ್ಫರೆನ್ಸ್‌ನಲ್ಲಿ ಐಟಿ ವಿಷನ್‌ ಗ್ರೂಪ್‌ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣ, ಬಿಟಿ ವಿಷನ್‌ ಗ್ರೂಪ್‌ ಸದಸ್ಯೆ ಡಾಣ ಕಿರಣ್‌ ಮಜುಂದಾರ್‌ ಷಾ, ನಾಸ್ಕಾಂ ಅಧ್ಯಕ್ಷೆ ದೇ ಬಜಾನಿ ಘೋಷ್‌ ಸಹಿತ ಪ್ರಮುಖ ಕಂಪೆನಿಗಳ ಮುಖ್ಯಸ್ಥರು ಪಾಲ್ಗೊಂಡರು.

Advertisement

Udayavani is now on Telegram. Click here to join our channel and stay updated with the latest news.

Next