ಮಡಿಕೇರಿ ಜನರ ಹಿತ ಸಲ್ಲಿಕೆ ಮಾಡಬೇಕು. ಜೊತೆಗೆ ಸರ್ಕಾರಿ ಅಭಿಯೋಜಕರಿಗೆ ಕಾಲ ಕಾಲಕ್ಕೆ ಮಾಹಿತಿ ಒದಗಿಸಿ ನೊಂದವರಿಗೆ ನ್ಯಾಯ ದೊರಕಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಸಲಹೆ ನೀಡಿದ್ದಾರೆ.
ನಗರದ ಹೊರ ವಲಯದಲ್ಲಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಕಾನೂನು ಅರಿವು ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತನಿಖಾಧಿಕಾರಿಗಳು ದೋಷ ಆರೋಪ ಪಟ್ಟಿ ಸಲ್ಲಿಸಿ ನಮ್ಮ ಕೆಲಸ ಮುಗಿಯಿತು ಎಂದು ಕೈತೊಳೆದುಕೊಳ್ಳುವುದು ಸರಿಯಲ್ಲ. ಪೊಲೀಸ್ ಠಾಣಾಧಿಕಾರಿಯಾಗಿ ಯಾರೇ ಕರ್ತವ್ಯ ನಿರ್ವಹಿಸಿದರೂ ಸಹ, ಸಹೋದ್ಯೋಗಿ ಸಿಬಂದಿ ಜತೆ ಚರ್ಚಿಸಿ ಸರ್ಕಾರಿ ಅಭಿಯೋಜಕರಿಗೆ ಸಂಬಂಧಪಟ್ಟ ಪ್ರಕರಣ ಬಗ್ಗೆ ಸಾಕ್ಷಿ ಒದಗಿಸಿ ನ್ಯಾಯ ಕೊಡಿಸಲು ಪ್ರಯತ್ನಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ತಿಳಿಸಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೊಡಗು ಜಿಲ್ಲಾ ಪೊಲೀಸ್ ನೂತನ ಫೇಸ್‌ಬುಕ್ ಪೇಜ್ ಅನ್ನು ಉದ್ಘಾಟಿಸಿ ಮಾತನಾಡಿ ಆಡಳಿತಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಎದುರಾದಾಗ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಚರ್ಚಿಸಿ ಕೆಲವು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಆ ದಿಸೆಯಲ್ಲಿ ದಿನದ 24 ಗಂಟೆಯೂ ಸಹ ಪೊಲೀಸ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ ಎಂದು ಅವರು ಹೇಳಿದರು. ಎಸ್ಪಿ ಡಾ| ಸುಮನ್ ಡಿ. ಪೆನ್ನೇಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಿಐಡಿ ವಿಭಾಗದ ಕಾನೂನು ಸಲಹೆಗಾರ ಮಹೇಶ್ ವೈದ್ಯ ಆಸ್ತಿ ಪಾಸ್ತಿ ರಕ್ಷಣೆ ಸಂದರ್ಭದಲ್ಲಿ ನಿರ್ವಹಿಸಬೇಕಾದ ಪಾತ್ರ ಮತ್ತಿತರ ಕಾನೂನು ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಜಯಕುಮಾರ್ ಸ್ವಾಗತಿಸಿದರು. ಸುಕನ್ಯಾ ಪ್ರಾರ್ಥಿಸಿದರು. ಚೇತನ್ ಕಾರ್ಯಕ್ರಮ ನಿರೂಪಿಸಿದರು. ಮುರಳೀಧರ ವಂದಿಸಿದರು.
ವಾದ ಮಂಡನೆಗೆ ಸಹಕಾರಿ
ಸರ್ಕಾರಿ ಅಭಿಯೋಜಕ ನಾರಾಯಣ ಪೊಲೀಸ್ ಇಲಾಖೆಯಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿ ಯಾವುದೇ ಪ್ರಕರಣಗಳನ್ನು ಹೆಚ್ಚಿನ ಆಸಕ್ತಿ ಮತ್ತು ಶ್ರಮವಹಿಸಿ ಸಾಕ್ಷಿಗಳನ್ನು ಸಂಗ್ರಹಿಸಿ ಅಭಿಯೋಜಕರಿಗೆ ಒದಗಿಸಿದಾಗ ಪರಿಣಾಮಕಾರಿಯಾಗಿ ವಾದ ಮಂಡಿಸಲು ಸಹಕಾರಿಯಾಗುತ್ತದೆ. ನೊಂದವರಿಗೆ ನ್ಯಾಯ ಕೊಡಿಸಲು ಸಾಧ್ಯವಾಗುತ್ತದೆ ಎಂದರು.
ಪೋಕೊÕàಸಹಿತ ೆ ಪ್ರಕರಣಗಳಿಗೆ ವೈದ್ಯಕೀಯ ವರದಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಸಿಐಡಿ ವಿಭಾಗದ ಕಾನೂನು ಸಲಹೆಗಾರ ಮಹೇಶ್ ವೈದ್ಯ ಮಾತನಾಡಿ ಆಡಳಿತ ನಿರ್ವಹಣೆ, ಸಾರ್ವಜನಿಕರ ಆಸ್ತಿ ಪಾಸ್ತಿ ರಕ್ಷಣೆ ನಿರ್ವಹಿಸಬೇಕಾದ ಪಾತ್ರ ಮತ್ತಿತರ ಕಾನೂನು ಮಾಹಿತಿ ನೀಡಿದರು.