Advertisement

ದುಡ್ಡಲ್ಲ-ದುಡಿಮೆಯೇ ದೊಡ್ಡಪ್ಪ: ಬಸವರಾಜ ಬೊಮ್ಮಾಯಿ

03:14 PM May 19, 2022 | Team Udayavani |

ಚಿಕ್ಕಮಗಳೂರು: ದುಡ್ಡೆ ದೊಡ್ಡಪ್ಪ ಅಲ್ಲ, ದುಡಿಮೆಯೇ ದೊಡ್ಡಪ್ಪ. ದುಡಿಯುವ ಸಮಾಜ ಕಟ್ಟಬೇಕೆನ್ನುವುದು ಸರ್ಕಾರದ ಧ್ಯೇಯವಾಗಿದೆ. ಸಮಾನತೆಯ ಸಮಾಜ ನಿರ್ಮಾಣವಾಗಬೇಕಿದೆ. ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ ಹಮ್ಮಿಕೊಂಡಿದ್ದ 384 ಕೋಟಿ ರೂ. ವೆಚ್ಚದ ಜಿಲ್ಲೆಯ ವಿವಿಧ ಇಲಾಖೆ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಸ್ವಾವಲಂಬಿ ಬದುಕು ಬದುಕಬೇಕು. ಈ ಹಿನ್ನೆಲೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಸತಿ ನಿಲಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಸ್‌ಸಿ, ಎಸ್‌ಟಿ, ಬಡತನ ರೇಖೆಗಿಂತ ಕಳೆಮಟ್ಟದಲ್ಲಿರುವರಿಗೆ 75 ಯುನಿಟ್‌ ವಿದ್ಯುತ್‌ ಉಚಿತವಾಗಿ ನೀಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಮೂರು ಸಾವಿರ ಕಿಮೀ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ. ರೈತರ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎಂದು ಅಧಿಕಾರ ಹಿಡಿದ 4 ಗಂಟೆಯಲ್ಲೇ ವಿದ್ಯಾನಿಧಿ ಯೋಜನೆ ರೂಪಿಸಲಾಗಿದೆ. ಯೋಜನೆಯಿಂದ 11 ಲಕ್ಷ ಮಕ್ಕಳು ಇದರ ಉಪಯೋಗ ಪಡೆದಿದ್ದಾರೆ. ಈ ವರ್ಷ 14 ಲಕ್ಷ ಮಕ್ಕಳಿಗೆ ಈ ಯೋಜನೆಯ ಉಪಯೋಗ ಪಡೆದುಕೊಳ್ಳುವ ಗುರಿ ಹೊಂದಲಾಗಿದೆ. ಬಜೆಟ್‌ನಲ್ಲಿ ಘೋಷಿಸಿದ ಬಹುಪಾಲು ಯೋಜನೆಗಳು ಈಗಾಗಲೇ ಜಾರಿಯಲ್ಲಿವೆ. ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಸರ್ಕಾರ ನಿರಂತರವಾಗಿ ಮಾಡುತ್ತಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್‌ ಪೂಜಾರಿ, ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್‌, ಶಾಸಕರಾದ ಎಂ.ಪಿ. ಕುಮಾರಸ್ವಾಮಿ, ಬೆಳ್ಳಿ ಪ್ರಕಾಶ್‌, ಡಿ.ಎಸ್. ಸುರೇಶ್‌, ಟಿ.ಡಿ. ರಾಜೇಗೌಡ, ವಿಧಾನ ಪರಿಷತ್‌ ಸದಸ್ಯ ಎಂ.ಕೆ. ಪ್ರಾಣೇಶ್‌ ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next